ನಾಳೆ ಶುರುವಾಗಲಿದೆ Redmi Note 15 SE 5G ಮೊಬೈಲ್‌ ಸೇಲ್‌! ಬೆಲೆ ನೋಡಿ

HIGHLIGHTS

ನಾಳೆ ಫ್ಲಿಪ್‌ಕಾರ್ಟ್‌ನಲ್ಲಿ ರೆಡ್ಮಿ ನೋಟ್‌ 15 SE ಸೇಲ್‌ ಶುರು

ರೆಡ್ಮಿ ನೋಟ್‌ 15 SE ಫೋನ್‌ ಆಕರ್ಷಕ ರೆಡ್‌ ಕಲರ್‌ ಆಯ್ಕೆ ಪಡೆದಿದೆ

ಈ ಹೊಸ ಮೊಬೈಲ್‌ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ

ನಾಳೆ ಶುರುವಾಗಲಿದೆ Redmi Note 15 SE 5G ಮೊಬೈಲ್‌ ಸೇಲ್‌! ಬೆಲೆ ನೋಡಿ

ಇತ್ತೀಚಿಗೆ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ Redmi Note 15 SE 5G ಮೊಬೈಲ್‌ ಸ್ಟೈಲಿಶ್‌ ಲುಕ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಏಪ್ರಿಲ್‌ 7 ರಂದು) ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಲಿದೆ. ಈ ನೂತನ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್‌ 5,800mAh ಬ್ಯಾಟರಿ ಸಪೋರ್ಟ್‌ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಪಡೆದುಕೊಂಡಿದ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದುಕೊಂಡಿರುವ ಜೊತೆಗೆ ಕರ್ವ್ಡ್ AMOLED ಸೌಲಭ್ಯ ಒಳಗೊಂಡಿದೆ. ಹಾಗಾದರೆ ರೆಡ್ಮಿ ನೋಟ್‌ 15 SE 5G ಮೊಬೈಲ್‌ನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಫ್ಲಿಪ್‌ಕಾರ್ಟ್‌ನಲ್ಲಿ Lava Bold N2 Pro ಮೊಬೈಲ್‌ ಖರೀದಿಗೆ ಲಭ್ಯ! ಬೆಲೆ 7,999 ರೂ.ಗಳು

Redmi Note 15 SE 5G ಸೇಲ್‌ ಡಿಟೇಲ್ಸ್‌

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ರೆಡ್ಮಿ ನೋಟ್‌ 15 SE 5G ಸ್ಮಾರ್ಟ್‌ಫೋನ್‌ ನಾಳೆ (ಏಪ್ರಿಲ್‌ 7 ರಂದು) ಮಧ್ಯಾಹ್ನ 12 ಗಂಟೆಗೆ ಮೊದಲ ಸೇಲ್‌ ಶುರು ಮಾಡಲಿದೆ. ಇನ್ನು ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 24,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 25,999 ರೂ.ಗಳು ಆಗಿದೆ. ಅದೇ ರೀತಿ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 27,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಕಾರ್ಬನ್ ಬ್ಲಾಕ್, ಕ್ರಿಮ್ಸನ್ ರಿಸರ್ವ್ (ರೆಡ್) ಮತ್ತು ಫ್ರಾಸ್ಟೆಡ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Redmi Note 15 SE

ರೆಡ್ಮಿ ನೋಟ್‌ 15 SE 5G ಮೊಬೈಲ್‌ ಫೀಚರ್ಸ್‌

ಹೊಸ ರೆಡ್ಮಿ ನೋಟ್‌ 15 SE 5G ಮೊಬೈಲ್‌ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 3,200 nits ಪೀಕ್‌ ಬ್ರೈಟ್ನೆಸ್‌ ಬೆಂಬಲಿತ 1,080×2,392 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರೆಡ್ಮಿ ನೋಟ್‌ 15 SE 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 20 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 5,800mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo