8,000mAh ಬ್ಯಾಟರಿಯೊಂದಿಗೆ Redmi Note 17 5G ಮೊಬೈಲ್‌ ಬಿಡುಗಡೆ! ಬೆಲೆ ಎಷ್ಟು ನೋಡಿ

HIGHLIGHTS

ರೆಡ್ಮಿ ನೋಟ್ 17 ಫೋನ್ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ

ರೆಡ್ಮಿ ನೋಟ್ 17 ಮೊಬೈಲ್‌ 8,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ

ರೆಡ್ಮಿ ನೋಟ್ 17 ಫೋನ್‌ ಸ್ನಾಪ್‌ಡ್ರಾಗನ್ 4 Gen 4 ಪ್ರೊಸೆಸರ್‌ ಹೊಂದಿದೆ

8,000mAh ಬ್ಯಾಟರಿಯೊಂದಿಗೆ Redmi Note 17 5G ಮೊಬೈಲ್‌ ಬಿಡುಗಡೆ! ಬೆಲೆ ಎಷ್ಟು ನೋಡಿ

ಜನಪ್ರಿಯ ರೆಡ್ಮಿ ಮೊಬೈಲ್‌ ಕಂಪನಿಯು ಹೊಸದಾಗಿ Redmi Note 17 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಆಗಷ್ಟ್‌ 6 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್‌ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಸರಣಿಯ ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ. ಅಲ್ಲದೇ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಇದರೊಂದಿಗೆ ಈ ಫೋನ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಇನ್ನು ಈ ಫೋನ್‌ ಆರ್ಕ್ಟಿಕ್ ಬ್ಲೂ, ಡಾರ್ಕ್ ನೈಟ್ ಮತ್ತು ಸ್ಟಾರ್‌ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಹಾಗಾದರೇ ರೆಡ್ಮಿ ನೋಟ್ 17 5G ಮೊಬೈಲ್‌ ಬೆಲೆ, ಸೇಲ್‌ ಡೇಟ್ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ Vivo S2 ಮೊಬೈಲ್‌ ಬಿಡುಗಡೆ! 7,050mAh ಬ್ಯಾಟರಿ, 32MP ಸೆಲ್ಫಿ ಕ್ಯಾಮೆರಾ

Redmi Note 17 5G ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ರೆಡ್ಮಿ ಕಂಪನಿಯ ಹೊಸ ರೆಡ್ಮಿ ನೋಟ್ 17 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ನೂತನ ಫೋನಿನ 6GB RAM + 128GB ವೇರಿಯಂಟ್‌ ಬೆಲೆಯು 27,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 30,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಆರ್ಕ್ಟಿಕ್ ಬ್ಲೂ, ಡಾರ್ಕ್ ನೈಟ್ ಮತ್ತು ಸ್ಟಾರ್‌ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಈ ಫೋನ್‌ ಇದೇ ಆಗಸ್ಟ್ 12 ರಂದು ಅಮೆಜಾನ್ ಮತ್ತು ಶಿಯೋಮಿ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟ ಶುರು ಮಾಡಲಿದೆ.

Redmi Note 17 5G

ರೆಡ್ಮಿ ನೋಟ್ 17 5G ಫೋನಿನ ಫೀಚರ್ಸ್‌ ಹೀಗಿವೆ

ರೆಡ್ಮಿ ನೋಟ್ 17 5G ಫೋನ್‌ 6.9 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 1,800 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಫೋರ್ಟ್‌ ಪಡೆದಿದೆ. ಅಲ್ಲದೇ ಡಿಸ್‌ಪ್ಲೇಯು 1,080 x 2,396 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ರೆಡ್ಮಿ ನೋಟ್ 17 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 8,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದೆ. ಇದು 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 22.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile