ಆಗಷ್ಟ್ 6 ರಂದು ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ Redmi Note 17 5G ಮೊಬೈಲ್!
ನಾಳೆ (ಆಗಷ್ಟ್ 5 ರಂದು) ಭಾರತದಲ್ಲಿ ರೆಡ್ಮಿ ನೋಟ್ 17 ಲಾಂಚ್
ರೆಡ್ಮಿ ನೋಟ್ 17 ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿರಲಿದೆ
ರೆಡ್ಮಿ ನೋಟ್ 17 ಫೋನ್ ಸ್ನಾಪ್‌ಡ್ರಾಗನ್ 4 ಜೆನ್ 4 ಪ್ರೊಸೆಸರ್ ಪಡೆದಿರಲಿದೆ
ರೆಡ್ಮಿ ಮೊಬೈಲ್ ಕಂಪನಿಯು ಹೊಸದಾಗಿ Redmi Note 17 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ. ರೆಡ್ಮಿ ಸಂಸ್ಥೆಯು ತನ್ನ ನೂತನ ಮೊಬೈಲ್ ಅನ್ನು ಇದೇ ಆಗಷ್ಟ್ 6 ರಂದು ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಹಾಗೆಯೇ ರೆಡ್ಮಿ ನೋಟ್ 17 ಮೊಬೈಲ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 4 ಜೆನ್ 4 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡುವ ಸಾಧ್ಯತೆಗಳು ಇವೆ. ಇದು ಲೈಟ್ ಬ್ಲೂ ಹಾಗೂ ಪರ್ಪಲ್ ಕಲರ್ ಆಯ್ಕೆ ಪಡೆದಿರಲಿರುವ ಜೊತೆಗೆ AMOLED ಡಿಸ್‌ಪ್ಲೇ ಪಡೆದಿರುವ ನಿರೀಕ್ಷೆಗಳು ಇವೆ. ಹಾಗಾದರೇ ರೆಡ್ಮಿ ನೋಟ್ 17 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
SurveyAlso Read : ChatGPT ಮಾತ್ರವಲ್ಲ! ವಿದ್ಯಾರ್ಥಿಗಳಿಗೆ ಉಪಯುಕ್ತ AI ಟೂಲ್‌ಗಳು ಇಲ್ಲಿವೆ ನೋಡಿ
Redmi Note 17 5G ಲಾಂಚ್ ಮಾಹಿತಿ
ಮಾರುಕಟ್ಟೆಗೆ ಹೊಸದಾಗಿ ಎಂಟ್ರಿ ಕೊಡಲಿರುವ ರೆಡ್ಮಿ ನೋಟ್ 17 ಸ್ಮಾರ್ಟ್‌ಫೋನ್‌ನ ನಿರೀಕ್ಷಿತ ಫೀಚರ್ಸ್ ಗ್ರಾಹಕರ ಕುತೂಹಲ ಹೆಚ್ಚಿಸಿವೆ. ಈ ಫೋನ್ ಇದೇ ಆಗಷ್ಟ್ 6 ರಂದು ಮಧ್ಯಾಹ್ನ 12 ಗಂಟೆಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಇನ್ನು ಇದು ಮೀಡ್‌ರೇಂಜ್ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ಇಡುವ ನಿರೀಕ್ಷೆಗಳು. ಇದು ಲೈಟ್ ಬ್ಲೂ ಹಾಗೂ ಪರ್ಪಲ್ ಕಲರ್ ಆಯ್ಕೆಯಲ್ಲಿ ಬರಲಿದೆ.

ರೆಡ್ಮಿ ನೋಟ್ 17 ಸ್ಮಾರ್ಟ್‌ಫೋನ್ ಫೀಚರ್ಸ್
ಮುಂಬರುವ ಹೊಸ ರೆಡ್ಮಿ ನೋಟ್ 17 ಮೊಬೈಲ್ ಟ್ರೂ ಕಲರ್ ಅನ್ನು ಒಳಗೊಂಡಿರುವ AMOLED ಪ್ಯಾನಲ್ ಹೊಂದಿರಲಿದೆ. ಹಾಗೆಯೇ ಈ ಫೋನ್ 7 ಇಂಚಿನ ಡಿಸ್‌ಪ್ಲೇ ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದ್ದು, ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಫೋನ್‌ನಲ್ಲಿ ಸ್ನಾಪ್‌ಡ್ರಾಗನ್ 4 Gen 4 SoC ಚಿಪ್‌ಸೆಟ್ ಪ್ರೊಸೆಸರ್ ಪವರ್ ಇರಬಹುದು. ಇದಕ್ಕೆ ಪೂರಕವಾಗಿ 8GB RAM ಆಯ್ಕೆಯ ವೇರಿಯಂಟ್ ಇರುವ ಸಾಧ್ಯತೆ ಇದೆ.
ಹಾಗೆಯೇ ರೆಡ್ಮಿ ನೋಟ್ 17 ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿರುವ ನಿರೀಕ್ಷೆಗಳು ಇವೆ. ಇನ್ನು ಇದರ ಬ್ಯಾಟರಿ ವಿಭಾಗವೂ ಈ ಫೋನ್‌ನ ಪ್ರಮುಖ ಆಕರ್ಷಣೆಯಾಗಿದ್ದು, 8,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ನೀಡಲಾಗಬಹುದು ಎಂಬ ಮಾಹಿತಿ ಹೊರಬಿದ್ದಿದೆ. ಈ ಬ್ಯಾಟರಿ ದೀರ್ಘಕಾಲದ ಬಳಕೆಯನ್ನು ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
