Redmi Note 17 5G with 8000mah battery Phone first sale today via Amazon price offers specs
ಇತ್ತೀಚಿನ ಹೊಸ Redmi Note 17 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ಇಂದು (ಆಗಷ್ಟ್ 12 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಈ ಫೋನ್ ಸ್ನಾಪ್‌ಡ್ರಾಗನ್ 4 Gen 4 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ ಕ್ರಮವಾಗಿ 8,000mAh ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್ ಆರ್ಕ್ಟಿಕ್ ಬ್ಲೂ, ಡಾರ್ಕ್ ನೈಟ್ ಮತ್ತು ಸ್ಟಾರ್‌ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ ನೋಟ್ 17 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಲುಕ್ ಜೊತೆಗೆ ವೇಗದ ಪ್ರೊಸೆಸರ್ ಇರುವ Samsung Galaxy S25 ಬೆಲೆಯಲ್ಲಿ ಇಳಿಕೆ!
ದೇಶೀಯ ಮಾರುಕಟ್ಟೆಯಲ್ಲಿ ರೆಡ್ಮಿ ಕಂಪನಿಯ ರೆಡ್ಮಿ ನೋಟ್ 17 5G ಮೊಬೈಲ್ ಇಂದು (ಆಗಷ್ಟ್ 12 ರಿಂದ) ಅಮೆಜಾನ್ ಗ್ರೇಟ್ ಫ್ರಿಡಂ ಸೇಲ್ ಮೂಲಕ ಖರೀದಿಗೆ ಲಭ್ಯವಾಗಿದೆ. ಈ ನೂತನ ಫೋನಿನ 6GB RAM + 128GB ವೇರಿಯಂಟ್ ಬೆಲೆಯು 27,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 30,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಆರ್ಕ್ಟಿಕ್ ಬ್ಲೂ, ಡಾರ್ಕ್ ನೈಟ್ ಮತ್ತು ಸ್ಟಾರ್‌ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಖರೀದಿಗೆ ಲಭ್ಯ.
ರೆಡ್ಮಿ ನೋಟ್ 17 5G ಮೊಬೈಲ್ 6.9 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 1,800 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಅಲ್ಲದೇ ಡಿಸ್‌ಪ್ಲೇಯು 1,080 x 2,396 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 4 Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB + 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ರೆಡ್ಮಿ ನೋಟ್ 17 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 8,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದೆ. ಇದು 45W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 22.5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.