Redmi Note 17 Pro launched today know pros and cons
ರೆಡ್ಮಿ ಮೊಬೈಲ್ ಸಂಸ್ಥೆಯು ನೂತನವಾಗಿ Redmi Note 17 Pro ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Snapdragon 6s Gen 4 SoC ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಹಾಗೂ 9,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ಲೌಡ್ ಬ್ಲೂ, ಪರ್ಪಲ್ ವೈಬ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 7,000mAh ಬ್ಯಾಟರಿ ಸೌಲಭ್ಯ ಇರುವ Moto G37 Power ಮೊಬೈಲ್ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ!
ರೆಡ್ಮಿ ಮೊಬೈಲ್ ಸಂಸ್ಥೆಯ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್ 36,999 ರೂ.ಗಳ ಬೆಲೆಯನ್ನು ಹೊಂದಿದೆ. 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯ 39,999 ರೂ.ಗಳು ಆಗಿದೆ. ಈ ಫೋನ್ ಕ್ಲೌಡ್ ಬ್ಲೂ, ಪರ್ಪಲ್ ವೈಬ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ ಸೆಪ್ಟೆಂಬರ್ 17 ರಿಂದ ಶಿಯೋಮಿ ವೆಬ್‌ಸೈಟ್ ಹಾಗೂ ಅಮೆಜಾನ್ ಇ ಕಾಮರ್ಸ್ ತಾಣಗಳಲ್ಲಿ ಲಭ್ಯವಿರುತ್ತವೆ.
ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,500 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಈ ಸ್ಕ್ರೀನ್ ಡಾಲ್ಬಿ ವಿಷನ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ Snapdragon 6s Gen 4 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68 ಮತ್ತು IP69K ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ HyperOS 3 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 9,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.