Redmi Note 17 Pro launched in India with 9000mAh Battery and Snapdragon 6s Gen 4 chipset check price specs
ರೆಡ್ಮಿ ಮೊಬೈಲ್ ಕಂಪನಿಯ ನೂತನ Redmi Note 17 Pro ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ರೆಡ್ಮಿ ನೋಟ್ 17 ಪ್ರೊ ಫೋನ್ ಇಂದು (ಸೆಪ್ಟೆಂಬರ್ 17 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಮೆಜಾನ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ Snapdragon 6s Gen 4 SoC ಚಿಪ್‌ಸೆಟ್ ಸೌಲಭ್ಯದ ಜೊತೆಗೆ 9,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 120Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಕ್ಲೌಡ್ ಬ್ಲೂ, ಪರ್ಪಲ್ ವೈಬ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಗ್ರಾಹಕರೇ ಕಡಿಮೆ ಬೆಲೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಜೊತೆಗೆ ಬಿಗ್ ವ್ಯಾಲಿಡಿಟಿ ಬೇಕೆ? ಈ ಪ್ಲಾನ್ ಗಮನಿಸಿ
ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹೊಸ ರೆಡ್ಮಿ ನೋಟ್ 17 ಪ್ರೊ ಫೋನ್ ಇಂದು (ಸೆಪ್ಟೆಂಬರ್ 17 ರಂದು) ಮಧ್ಯಾಹ್ನ 12 ಗಂಟೆಗೆ ಅಮೆಜಾನ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್ 36,999 ರೂ.ಗಳ ಬೆಲೆಯನ್ನು ಹೊಂದಿದೆ. 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆಯ 39,999 ರೂ.ಗಳು ಆಗಿದೆ. ಈ ಫೋನ್ ಕ್ಲೌಡ್ ಬ್ಲೂ, ಪರ್ಪಲ್ ವೈಬ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್ ಆಯ್ಕೆ ಪಡೆದುಕೊಂಡಿದೆ.
ರೆಡ್ಮಿ ನೋಟ್ 17 ಪ್ರೊ ಸ್ಮಾರ್ಟ್‌ಫೋನ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,500 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಈ ಸ್ಕ್ರೀನ್ ಡಾಲ್ಬಿ ವಿಷನ್, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ Snapdragon 6s Gen 4 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68 ಮತ್ತು IP69K ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ HyperOS 3 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ರೆಡ್ಮಿ ನೋಟ್ 17 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 9,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.