ಅಂತೂ ಇಂತೂ Redmi Note 17 Pro Max ಸ್ಮಾರ್ಟ್‌ಫೋನ್‌ ಲಾಂಚ್! ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಫೋನ್‌ 10,000mAh ಬ್ಯಾಟರಿ ಹೊಂದಿದೆ

ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಮೊಬೈಲ್‌ 50MP ಕ್ಯಾಮೆರಾ ಒಳಗೊಂಡಿದೆ

ರೆಡ್ಮಿಯ ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ರೆಡ್ಮಿ ಮೊಬೈಲ್‌ ಸಂಸ್ಥೆಯು ನೂತನವಾಗಿ Redmi Note 17 Pro Max ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Snapdragon 6 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 10,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ Matcha Green, Secret Sunrise ಮತ್ತು Stealth Black ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 7,000mAh ಬ್ಯಾಟರಿ ಸೌಲಭ್ಯ ಇರುವ Moto G37 Power ಮೊಬೈಲ್‌ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ!

Redmi Note 17 Pro Max ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ರೆಡ್ಮಿ ಕಂಪನಿಯ ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 8GB + 256GB ಸ್ಟೋರೇಜ್‌ ವೇರಿಯಂಟ್‌ 49,999 ರೂ.ಗಳ ಬೆಲೆಯನ್ನು ಹೊಂದಿದೆ. 12GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯ 55,999 ರೂ.ಗಳು ಆಗಿದೆ. ಈ ಫೋನ್‌ Matcha Green, Secret Sunrise ಮತ್ತು Stealth Black ಕಲರ್‌ ಆಯ್ಕೆ ಪಡೆದುಕೊಂಡಿದೆ.

Redmi Note 17 Pro Max

ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಮೊಬೈಲ್‌ ಫೀಚರ್ಸ್‌

ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಮೊಬೈಲ್‌ 6.83-ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 3,500 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ Snapdragon 6 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66, IP68 ಮತ್ತು IP69K ರೇಟಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದು Android 16 ಆಧಾರಿತ HyperOS 3 ಓಎಸ್ ಸಪೋರ್ಟ್ ಪಡೆದಿದೆ.

ಹಾಗೆಯೇ ರೆಡ್ಮಿ ನೋಟ್ 17 ಪ್ರೊ ಮ್ಯಾಕ್ಸ್‌ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :