ಜನಪ್ರಿಯ Redmi Turbo 5 ಸ್ಮಾರ್ಟ್ಫೋನ್ ಖರೀದಿಸುವ ಪ್ಲಾನ್ ಇದ್ರೆ, ಈ ಆಫರ್ ಬಿಡಬೇಡಿ!
ಫ್ಲಿಪ್ಕಾರ್ಟ್ನಲ್ಲಿ ರೆಡ್ಮಿ ಟರ್ಬೋ 5 ಫೋನಿಗೆ ಬೆಸ್ಟ್ ಆಫರ್
ರೆಡ್ಮಿ ಟರ್ಬೋ 5 ಮೊಬೈಲ್ 7,540mAh ಬ್ಯಾಟರಿ ಪಡೆದಿದೆ
ರೆಡ್ಮಿ ಟರ್ಬೋ 5 ಸ್ಮಾರ್ಟ್ಫೋನ್ ಆಕರ್ಷಕ ಕಲರ್ಗಳಲ್ಲಿ ಲಭ್ಯ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Redmi Turbo 5 ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 7,540mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ರೆಡ್ಮಿ ಟರ್ಬೋ 5 ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Redmi Turbo 5 ಮೊಬೈಲ್ ಈಗ ಆಫರ್ನಲ್ಲಿ ಲಭ್ಯ
ಮೀಡ್ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರೆಡ್ಮಿ ಟರ್ಬೋ 5 ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 54,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 44,990 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಆಕರ್ಷಕ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ರೆಡ್ಮಿ ಟರ್ಬೋ 5 5G ಫೋನ್ ಫೀಚರ್ಸ್ ಹೀಗಿವೆ
ರೆಡ್ಮಿ ಟರ್ಬೋ 5 5G ಮೊಬೈಲ್ 6.59 ಇಂಚಿನ 1.5K AMOLED ಡಿಸ್ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಮತ್ತು ಡಾಲ್ಬಿ ವಿಷನ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 6GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 + IP69K ರೇಟಿಂಗ್ ಸೌಲಭ್ಯ ಪಡೆದಿದೆ.
ರೆಡ್ಮಿ ಟರ್ಬೋ 5 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,540mAh ಬ್ಯಾಟರಿ ಬ್ಯಾಕ್ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್ಗೆ ಸಪೋರ್ಟ್ ಹೊಂದಿದೆ.