ನಾಳೆ Redmi Turbo 5 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಪ್ರಾರಂಭ! ಬೆಲೆ ಮಾಹಿತಿ ಇಲ್ಲಿದೆ

HIGHLIGHTS

ನಾಳೆ (ಜೂನ್‌ 19 ರಂದು) ರೆಡ್ಮಿ ಟರ್ಬೋ 5 ಫಸ್ಟ್‌ ಸೇಲ್‌

ರೆಡ್ಮಿ ಟರ್ಬೋ 5 ಮೀಡಿಯಾಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್ ಪಡೆದಿದೆ

ರೆಡ್ಮಿಯ ಈ ಫೋನ್‌ ಆಸ್ಫಾಲ್ಟ್ ಬ್ಲಾಕ್, ನೈಟ್ರೋ ಬ್ಲೂ ಮತ್ತು ಟರ್ಬೊ ವೈಟ್ ಕಲರ್‌ ಆಯ್ಕೆ ಹೊಂದಿದೆ

ದೇಶೀಯ ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಟ್ಟಿರುವ Redmi Turbo 5 ಮೊಬೈಲ್‌ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ನಾಳೆ (ಜೂನ್‌ 19 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ 7,540mAh ಬ್ಯಾಟರಿ ಸಪೋರ್ಟ್‌ ಜೊತೆಗೆ 100W ವೈರ್ಡ್‌ ಫಾಸ್ಟ್‌ ಚಾರ್ಜಿಂಗ್ ಪಡೆದಿರುವುದು ಪ್ಲಸ್ ಪಾಯಿಂಟ್‌ ಎನಿಸಿದೆ. ಹಾಗೆಯೇ ಇದು 50MP ಪ್ರಾಥಮಿಕ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೇ ರೆಡ್ಮಿ ಟರ್ಬೋ 5 5G ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Samsung Galaxy F36 5G ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ! ಟ್ರಿಪಲ್‌ ಕ್ಯಾಮೆರಾ ಸೌಲಭ್ಯ

ನಾಳೆ Redmi Turbo 5 ಫೋನ್‌ ಮಾರಾಟ

ರೆಡ್ಮಿ ಕಂಪನಿಯ ಹೊಸ ರೆಡ್ಮಿ ಟರ್ಬೋ 5 5G ಮೊಬೈಲ್‌ ಪವರ್‌ಫುಲ್‌ ಫೀಚರ್ಸ್‌ ಮೂಲಕ ಸದ್ದು ಮಾಡಿದೆ. ಅಂದಹಾಗೆ ಈ ಫೋನ್‌ ನಾಳೆ (ಜೂನ್‌ 19 ರಂದು) ಮಧ್ಯಾಹ್ನ 12 ಗಂಟೆಗೆ ಅಮೆಜಾನ್‌ ತಾಣದ ಮೂಲಕ ಫಸ್ಟ್‌ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್‌ ವೇರಿಯಂಟ್‌ 37,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 12GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 40,999 ರೂ.ಗಳು ಆಗಿದೆ. ಗ್ರಾಹಕರು SBI, ICICI ಬ್ಯಾಂಕ್ ಮತ್ತು Axis ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ ಕಂಪನಿಯು 2,000 ರೂ.ಗಳ ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಇನ್ನು ಈ ಫೋನ್‌ ಆಸ್ಫಾಲ್ಟ್ ಬ್ಲಾಕ್, ನೈಟ್ರೋ ಬ್ಲೂ ಮತ್ತು ಟರ್ಬೊ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ರೆಡ್ಮಿ ಟರ್ಬೋ 5 5G ಫೋನ್‌ ಫೀಚರ್ಸ್‌ ಮಾಹಿತಿ

ರೆಡ್ಮಿ ಟರ್ಬೋ 5 5G ಮೊಬೈಲ್‌ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಮತ್ತು ಡಾಲ್ಬಿ ವಿಷನ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 6GB + 256GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಪಡೆದಿದೆ.

ರೆಡ್ಮಿ ಟರ್ಬೋ 5 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,540mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :