ವೇಗದ ಪ್ರೊಸೆಸರ್‌ ಇರುವ Redmi Turbo 5 ಮೊಬೈಲ್‌ ಬೆಲೆಯಲ್ಲಿ ಸಖತ್‌ ಇಳಿಕೆ!

HIGHLIGHTS

ರೆಡ್ಮಿ ಟರ್ಬೋ 5 5G ಫೋನ್‌ ಈಗ ಭರ್ಜರಿ ರಿಯಾಯಿತಿಯಲ್ಲಿ ಲಭ್ಯ

ರೆಡ್ಮಿ ಟರ್ಬೋ 5 5G ಫೋನ್‌ 7,540mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ

ರೆಡ್ಮಿ ಟರ್ಬೋ 5 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಪ್ರೊಸೆಸರ್‌ ಹೊಂದಿದೆ

ವೇಗದ ಪ್ರೊಸೆಸರ್‌ ಇರುವ Redmi Turbo 5 ಮೊಬೈಲ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಗ್ರೇಟ್ ಫ್ರೀಡಂ ಸೇಲ್‌ ಚಾಲ್ತಿ ಇದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರೆಡ್ಮಿ ಕಂಪನಿಯ Redmi Turbo 5 ಸ್ಮಾರ್ಟ್‌ಫೋನ್‌ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,540mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ ಟರ್ಬೋ 5 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Huawei ಕಂಪನಿಯ ಈ ಹೊಸ ಟ್ಯಾಬ್ಲೆಟ್‌ಗಳು ಈಗ Flipkart ನಲ್ಲಿ ಖರೀದಿಗೆ ಲಭ್ಯ!

Redmi Turbo 5 ಬೆಲೆಯಲ್ಲಿ ಭಾರೀ ಇಳಿಕೆ

ಆಕರ್ಷಕ ಡಿಸೈನ್‌ ಹಾಗೂ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ ಟರ್ಬೋ 5 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 54,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 37,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Redmi Turbo 5

ರೆಡ್ಮಿ ಟರ್ಬೋ 5 5G ಫೋನ್‌ ಫೀಚರ್ಸ್‌ ಹೀಗಿವೆ

ರೆಡ್ಮಿ ಟರ್ಬೋ 5 5G ಮೊಬೈಲ್‌ 6.59 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಮತ್ತು ಡಾಲ್ಬಿ ವಿಷನ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 6GB + 256GB ಸ್ಟೋರೇಜ್‌ ವೇರಿಯಂಟ್ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ HyperOS 3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಪಡೆದಿದೆ.

ರೆಡ್ಮಿ ಟರ್ಬೋ 5 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,540mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್‌ ಹೊಂದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile