ಸದ್ದಿಲ್ಲದೆ ಭಾರತದಲ್ಲಿ Samsung Galaxy A08 ಮೊಬೈಲ್‌ ಬಿಡುಗಡೆ; ಬಜೆಟ್‌ ಬೆಲೆಗೆ ಲಭ್ಯ

HIGHLIGHTS

ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಫೋನ್‌ 6,000mAh ಬ್ಯಾಟರಿ ಹೊಂದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಮೊಬೈಲ್‌ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಈ ಮೊಬೈಲ್‌ ಮೂರು ಕಲರ್‌ ಆಯ್ಕೆ ಒಳಗೊಂಡಿದೆ

ಸದ್ದಿಲ್ಲದೆ ಭಾರತದಲ್ಲಿ Samsung Galaxy A08 ಮೊಬೈಲ್‌ ಬಿಡುಗಡೆ; ಬಜೆಟ್‌ ಬೆಲೆಗೆ ಲಭ್ಯ

ಸ್ಯಾಮ್‌ಸಂಗ್ ಮೊಬೈಲ್‌ ಸಂಸ್ಥೆಯು ಹೊಸದಾಗಿ Samsung Galaxy A08 ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್‌ MediaTek Helio G99+ ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಮೊಬೈಲ್‌ 90Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 6,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಡಾರ್ಕ್ ಬ್ಲೂ , ಗ್ರೀನ್ ಮತ್ತು ಸಿಲ್ವರ್ ಕಲರ್‌ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಬೇರೆ ಫೋನ್‌ನಲ್ಲಿ Gmail ತೆರೆದಿದ್ದರೆ ಚಿಂತೆ ಬೇಡ! ಈ ಕ್ರಮ ಅನುಸರಿಸಿ Sign Out ಮಾಡಿ

Samsung Galaxy A08 ಬೆಲೆ ಹಾಗೂ ಲಭ್ಯತೆ

ಸ್ಯಾಮ್‌ಸಂಗ್‌ ಮೊಬೈಲ್‌ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಮೊಬೈಲ್‌ ಆಕರ್ಷಕ ಡಿಸೈನ್‌ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ ಏಕೈಕ 4GB + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದ್ದು, ಇದರ ಬೆಲೆ 18,499 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಡಾರ್ಕ್ ಬ್ಲೂ , ಗ್ರೀನ್ ಮತ್ತು ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ Exclusive Stores, ರೀಟೇಲ್ ಸ್ಟೋರ್‌, Samsung.com ಮತ್ತು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿದೆ.

Samsung Galaxy A08

ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಫೀಚರ್ಸ್‌ ಹೀಗಿವೆ

ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಟ್ಟಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಮೊಬೈಲ್ 6.7 ಇಂಚಿನ HD+ PLS LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 90Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಮೊಬೈಲ್‌ MediaTek Helio G99+ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM ಮತ್ತು 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಮೈಕ್ರೋ SD ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸಬಹುದಾದ ಆಯ್ಕೆ ಪಡೆದುಕೊಂಡಿದೆ. ಅಲ್ಲದೇ ಇದು ನೀರಿನ ಸಿಂಪಡಣೆಯಿಂದ ರಕ್ಷಣೆ ನೀಡುವ IP64 ರೇಟಿಂಗ್ ಅನ್ನು ಸಹ ಹೊಂದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A08 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಎರಡನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 25W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ‘Circle to Search 3.0’, Gemini ಮತ್ತು Perplexity ಸೇವೆಗಳನ್ನು ಬೆಂಬಲಿಸುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile