ಜನಪ್ರಿಯ Samsung Galaxy A17 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಫ್ಲಿಪ್‌ಕಾರ್ಟ್ ತಾಣದಲ್ಲಿ ಗ್ಯಾಲಕ್ಸಿ A17 ಆಫರ್‌ನಲ್ಲಿ ಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ A17 ಮೊಬೈಲ್ 5,000mAh ಬ್ಯಾಟರಿ ಪಡೆದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A17 ಆಕ್ಟಾ ಕೋರ್ Exynos 1330 ಪ್ರೊಸೆಸರ್ ಹೊಂದಿದೆ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಕಂಪನಿಯ Samsung Galaxy A17 ಸ್ಮಾರ್ಟ್‌ಫೋನ್ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಆಕ್ಟಾ ಕೋರ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 5,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ಗ್ರೇ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A17 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Realme P4 Lite 5G ಮೊಬೈಲ್ ಈಗ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಲಭ್ಯ!
Samsung Galaxy A17 5G ಆಫರ್‌ನಲ್ಲಿ ಲಭ್ಯ
ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A17 ಮೊಬೈಲ್ ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 32,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 22,435 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ಗ್ರೇ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A17 ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಪಡೆದಿದೆ. ಇದರ ಸ್ಕ್ರೀನ್ 90Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 1080×2340 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದ್ದು ಅಲ್ಲದೇ ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A17 5G ಮೊಬೈಲ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು ಇದರಲ್ಲಿ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 5MP ಹಾಗೂ 2MP ಸೆನ್ಸಾರ್ ಸಪೋರ್ಟ್ ಅನ್ನು ಹೊಂದಿವೆ. ಅಲ್ಲದೇ ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 13 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಅಲ್ಲದೇ ಇದು 5,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿದ್ದು, 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
