Samsung Galaxy A35 5G ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಸಿಗುತ್ತೆ 14000 ರೂಗಳ ಡಿಸ್ಕೌಂಟ್‌

HIGHLIGHTS

Samsung Galaxy A35 5G ಮೊಬೈಲ್‌ ಬೆಲೆ ಭರ್ಜರಿ ಇಳಿಕೆ

Samsung Galaxy A35 5G ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ

Samsung Galaxy A35 5G ಫೋನ್ 5000mAh ಬ್ಯಾಟರಿ ಸೌಲಭ್ಯ ಹೊಂದಿದೆ

Samsung Galaxy A35 5G ಖರೀದಿಸಲು ಇದುವೇ ಬೆಸ್ಟ್‌ ಟೈಮ್‌! ಸಿಗುತ್ತೆ 14000 ರೂಗಳ ಡಿಸ್ಕೌಂಟ್‌

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಸಂಸ್ಥೆಯ ಗ್ಯಾಲಕ್ಸಿ A ಸರಣಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ ಪಡೆದಿವೆ. ಆ ಪೈಕಿ ಒಂದಾಗಿರುವ Samsung Galaxy A35 5G ಮೊಬೈಲ್‌ ಅನ್ನು ಆಫರ್‌ನಲ್ಲಿ ಖರೀದಿಸಲು ಈಗ ಅವಕಾಶ ಇದೆ. ಹೌದು ಲೀಡಿಂಗ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಎನಿಸಿರುವ Flipkart ವೆಬ್‌ಸೈಟ್‌ Samsung Galaxy A35 5G ಮೊಬೈಲ್‌ಗೆ ಬೊಂಬಾಟ್‌ ಬೆಲೆ ಇಳಿಕೆ ನೀಡಿದೆ. ಅಲ್ಲದೇ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ Samsung Exynos 1380 ಚಿಪ್‌ಸೆಟ್‌ ಕಾರ್ಯ ವೈಖರಿಯನ್ನು ಒಳಗೊಂಡಿದ್ದು ಜೊತೆಗೆ 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ Samsung Galaxy A35 5G ಫೋನಿಗೆ ಲಭ್ಯ ಇರುವ ಆಫರ್‌ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಬಳಕೆದಾರರೇ ಅಧಿಕ ಡೇಟಾ ಬೇಕಿದ್ದರೆ ಈ ರೀಚಾರ್ಜ್‌ ಪ್ಲಾನ್‌ಗಳನ್ನು ಒಮ್ಮೆ ಗಮನಿಸಿ!

Samsung Galaxy A35 5G ಮೊಬೈಲ್‌ ಬೆಲೆ ಇಳಿಕೆ

ಸ್ಯಾಮ್‌ಸಂಗ್‌ ಕಂಪನಿಯ Samsung Galaxy A35 5G ಮೊಬೈಲ್‌ ಆಕರ್ಷಕ ಬೆಲೆ ಇಳಿಕೆ ಕಂಡಿದ್ದು ಗ್ರಾಹಕರಿಗೆ ನೇರವಾಗಿ 14000 ರೂಗಳ ಡಿಸ್ಕೌಂಟ್‌ ಸಿಗಲಿದೆ. Flipkart ಇ ಕಾಮರ್ಸ್‌ ತಾಣದಲ್ಲಿ ಈ ಮೊಬೈಲ್‌ 33,999 ರೂಗಳ ಪ್ರೈಸ್‌ಟ್ಯಾಗ್‌ ಪಡೆದಿದ್ದು, ಆದರೆ ಸದ್ಯ 19,999 ರೂಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಪಡೆಯಬಹುದು. ಅಲ್ಲದೇ ಆಯ್ದ ಬ್ಯಾಂಕ್‌ಗಳಿಂದ ಭಿನ್ನ EMI ಆಯ್ಕೆಗಳನ್ನು ಪಡೆಯಬಹುದು. ಇನ್ನು ಈ ಫೋನ್‌ ಐಸ್‌ಬ್ಲೂ, Lilac ಹಾಗೂ ನೇವಿ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Samsung Galaxy A35 5G ಮೊಬೈಲ್‌ ಫೀಚರ್ಸ್‌

Samsung Galaxy A35 5G ಫೋನ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.6 ಇಂಚಿನ ಪುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ Gorilla ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಪಡೆದುಕೊಂಡಿದೆ. ಈ ಮೊಬೈಲ್‌ Samsung Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಅಲ್ಲದೇ ಬಾಹ್ಯ ಮೆಮೊರಿಯನ್ನು 1 TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಸಹ ಪಡೆದಿದೆ.

ಹಾಗೆಯೇ ಸ್ಯಾಮ್‌ಸಂಗ್‌ನ Samsung Galaxy A35 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು ಹಾಗೆಯೇ ಇದರ ಸೆಕೆಂಡರಿ 8MP ಸೆನ್ಸಾರ್‌ ಪಡೆದಿದೆ. ಅಲ್ಲದೇ ತೃತೀಯ ಕ್ಯಾಮೆರಾವು 5MP ಸೆನ್ಸರ್ ಸೌಲಭ್ಯ ಅನ್ನು ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 13MP ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೇ ಪನೋರಮಾ, ಪೋರ್ಟ್ರೇಟ್, ಪ್ರೊ ವೀಡಿಯೊ, ಸಿಂಗಲ್ ಟೇಕ್, ಸ್ಲೋ ಮೋಷನ್, ಆಯ್ಕೆಗಳು ಇವೆ. ಇನ್ನು ಈ ಫೋನ್‌ 5000mAh ಬ್ಯಾಟರಿ ಜೊತೆಗೆ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo