ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಅನೇಕ ಗ್ರಾಹಕರು ಡಿಸ್ಕೌಂಟ್ ಹುಡುಕುತ್ತಾರೆ. ನೀವು ಡಿಸ್ಕೌಂಟ್ ನೋಡುತ್ತಿದ್ದರೆ ಇಲ್ಲಿದೆ ಗುಡ್‌ನ್ಯೂಸ್. ಪ್ರಸ್ತುತ ಸ್ಯಾಮ್‌ಸಂಗ್ ಕಂಪನಿಯ Samsung Galaxy A36 5G ಮೊಬೈಲ್ ಆಫರ್‌ನಲ್ಲಿ ಕಾಣಿಸಿಕೊಂಡಿದೆ. ಹೌದು, ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್ ಭಾರೀ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ ಹಾಗೂ 45W ಫಾಸ್ಟ್ ಚಾರ್ಜಿಂಗ್ ಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 50MP ಕ್ಯಾಮೆರಾ ಸಪೋರ್ಟ್ ಸಹ ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಬಜೆಟ್ ಬೆಲೆಯಲ್ಲಿ iQOO Z11x 5G ಮೊಬೈಲ್ ಬಿಡುಗಡೆ! ಸ್ಟೈಲಿಶ್ ಲುಕ್ ಜೊತೆಗೆ 7,200mAh ಬ್ಯಾಟರಿ
ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB + 256GB ವೇರಿಯಂಟ್ ಬೆಲೆ 38,999 ರೂಗಳು ಪ್ರೈಸ್‌ಟ್ಯಾಗ್‌ನಲ್ಲಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 33,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ಲ್ಯಾವೆಂಡರ್, ವೈಟ್ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಸ್ಮಾರ್ಟ್‌ಫೋನ್ 6.7 ಇಂಚಿನ FHD+ AMOLED ಪ್ಯಾನೆಲ್ ಡಿಸ್‌ಪ್ಲೇ ಹೊಂದಿದೆ. ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 1,900 nits ಬ್ರೈಟ್ನೆಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಇದು 8GB + 128GB, 8GB + 256GB ಮತ್ತು 12GB + 512GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಮೊಬೈಲ್ 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಆಗಿದೆ. ಇನ್ನುಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸರ್ ಮತ್ತು 5 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಆಗಿವೆ. ಅಲ್ಲದೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ. ಈ ಫೋನ್ ಆಂಡ್ರಾಯ್ಡ್ 15 ಓಎಸ್ ಕಾರ್ಯನಿರ್ವಹಿಸುತ್ತದೆ ಹಾಗೂ ಆರು ತಲೆಮಾರುಗಳವರೆಗೆ ಆಂಡ್ರಾಯ್ಡ್ OS ಅಪ್‌ಗ್ರೇಡ್ ಸಪೋರ್ಟ್ ಹೊಂದಿದೆ.