ಜನಪ್ರಿಯ ಇ ಕಾಮರ್ಸ್ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy A36 ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 10,001mAh ಬ್ಯಾಟರಿ ಇರುವ Realme Narzo Power ಮೊಬೈಲ್ ಖರೀದಿಸಲು ಇದುವೇ ಬೆಸ್ಟ್ ಟೈಮ್!
ಮೀಡ್‌ರೇಂಜ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 39,499 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 26,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಲ್ಯಾವೆಂಡರ್, ಬ್ಲ್ಯಾಕ್, ವೈಟ್, ಡಾರ್ಕ್ ಬ್ಲೂ ಹಾಗೂ ಡಾರ್ಕ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 2340 x 1080 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಸೌಲಭ್ಯದ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP67 ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A36 ಸ್ಮಾರ್ಟ್‌ಫೋನ್ ಹಿಂಬದಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 8MP ಮತ್ತು 5MP ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 12MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 45W ಸೂಪರ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links