ಸೈಲೆಂಟ್‌ ಆಗಿ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy A37 5G ಮೊಬೈಲ್‌

HIGHLIGHTS

ಗ್ಯಾಲಕ್ಸಿ A37 5G ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೋನ್‌ Exynos 1680 ಚಿಪ್‌ಸೆಟ್‌ ಪಡೆದಿದೆ

ಸ್ಯಾಮ್‌ಸಂಗ್‌ನ ಈ ಹೊಸ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ

ಸೈಲೆಂಟ್‌ ಆಗಿ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy A37 5G ಮೊಬೈಲ್‌

ಲೀಡಿಂಗ್ ಮೊಬೈಲ್‌ ಬ್ರಾಂಡ್‌ ಸ್ಯಾಮ್‌ಸಂಗ್‌ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಇಂದು (ಮಾರ್ಚ್ 25 ರಂದು) ಹೊಸದಾಗಿ Samsung Galaxy A37 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ One UI 8.5 ಬೆಂಬಲಿತ ಆಂಡ್ರಾಯ್ಡ್‌ 16 ಓಎಸ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ ಇದು ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಅಲ್ಲದೇ ಇದರ ಡಿಸ್‌ಪ್ಲೇಯು Super AMOLED ಮಾದರಿಯಲ್ಲಿ ಇದೆ. ಇನ್ನು ಈ ಮೊಬೈಲ್‌ ಮೂರು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೋನಿನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಭಾರತದಲ್ಲಿ Samsung Galaxy A57 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೀಗಿವೆ

Samsung Galaxy A37 5G ಬೆಲೆ ಹಾಗೂ ಲಭ್ಯತೆ

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ ಹೊಂದಿದ್ದು ಈ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 41,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 47,999 ರೂ.ಗಳು ಆಗಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್‌ 52,999 ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದೆ. ಅಂದಹಾಗೆ ಈ ಮೊಬೈಲ್‌ Awesome Lavender, Awesome Charcoal ಹಾಗೂ Awesome Graygreen ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Samsung Galaxy A37

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೀಚರ್ಸ್‌ ಹೀಗಿವೆ

ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ 6.7 ಇಂಚಿನ FHD+ ಸೂಪರ್ AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ One UI 8.5 ಬೆಂಬಲಿತ ಆಂಡ್ರಾಯ್ಡ್‌ 16 ಓಎಸ್‌ ಜೊತೆಗೆ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ನೀರು ಮತ್ತು ಧೂಳು ನಿರೋಧಕಕ್ಕಾಗಿ ಈ ಮೊಬೈಲ್‌ IP68 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 8MP ಅಲ್ಟ್ರಾ ವೈಡ್‌ ಮತ್ತು 5MP ಮೈಕ್ರೋ ಸೆನ್ಸಾರ್‌ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 12 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo