Samsung ಕಂಪನಿಯ ಈ ಸ್ಟೈಲಿಶ್‌ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ! 50MP ಕ್ಯಾಮೆರಾ

HIGHLIGHTS

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮೊಬೈಲ್‌ ಬೆಲೆಯಲ್ಲಿ ಭಾರೀ ಡಿಸ್ಕೌಂಟ್

ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ

ಸ್ಯಾಮ್‌ಸಂಗ್‌ನ ಈ ಫೋನ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಒಳಗೊಂಡಿದೆ

ದಕ್ಷಿಣ ಕೊರಿಯಾದ ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್‌ನ ಜನಪ್ರಿಯ ಫೋನ್‌ಗಳ ಪೈಕಿ ಒಂದಾಗಿರುವ Samsung Galaxy A37 5G ಫೋನ್‌ ಈಗ ಭರ್ಜರಿ ಆಫರ್‌ನಲ್ಲಿ ಖರೀದಿಗೆ ಲಭ್ಯ. ಹೌದು, ಪ್ರಸ್ತುತ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ ಅಂದಹಾಗೆ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Redmi ಕಂಪನಿಯ ಈ ಬಹುಬೇಡಿಕೆಯ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಏರಿಕೆ!

Samsung Galaxy A37 5G ಬೆಲೆಯಲ್ಲಿ ಸಖತ್ ಕಡಿತ

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 45,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 36,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ Awesome Lavender, Awesome Charcoal ಹಾಗೂ Awesome Graygreen ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೀಚರ್ಸ್‌ ಹೀಗಿವೆ

ಇತ್ತೀಚಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ 6.7 ಇಂಚಿನ FHD+ ಸೂಪರ್ AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ One UI 8.5 ಬೆಂಬಲಿತ ಆಂಡ್ರಾಯ್ಡ್‌ 16 ಓಎಸ್‌ ಜೊತೆಗೆ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ನೀರು ಮತ್ತು ಧೂಳು ನಿರೋಧಕಕ್ಕಾಗಿ ಈ ಮೊಬೈಲ್‌ IP68 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 8MP ಅಲ್ಟ್ರಾ ವೈಡ್‌ ಮತ್ತು 5MP ಮೈಕ್ರೋ ಸೆನ್ಸಾರ್‌ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 12 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :