ಟ್ರಿಪಲ್ ಕ್ಯಾಮೆರಾ ಇರುವ Samsung Galaxy A56 ಮೊಬೈಲ್ ಈಗ ಆಫರ್‌ನಲ್ಲಿ ಲಭ್ಯ!
ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಬೆಲೆಯಲ್ಲಿ ಇಳಿಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್ 12MP ಸೆಲ್ಫಿ ಕ್ಯಾಮೆರಾ ರಚನೆಯನ್ನು ಪಡೆದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದೆ
ಅಮೆಜಾನ್ ಪ್ರೈಮ್ ಡೇ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿವೆ. ಈ ವಿಶೇಷ ಮಾರಾಟದಲ್ಲಿ ಸ್ಯಾಮ್‌ಸಂಗ್ ಕಂಪನಿಯ Samsung Galaxy A56 ಸ್ಮಾರ್ಟ್‌ಫೋನ್ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಅಂದಹಾಗೆ ಈ ಸೇಲ್ ಇಂದು ಮುಕ್ತಾಯವಾಗಲಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಚಾನ್ಸ್ ಇದೆ. ಸಂಸ್ಥೆಯ ಈ ಮೊಬೈಲ್ Exynos 1580 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಮೀಡ್‌ನೈಟ್ ಬ್ಲೂ, ಆಲೀವ್ ಹಾಗೂ ವೈಲೇಟ್ ಗ್ಲೋ ಕಲರ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Amazon Prime Day Sale 2026 ಪ್ರಾರಂಭ; ಈ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್
Samsung Galaxy A56 ಮೊಬೈಲ್ ಬೆಲೆಯಲ್ಲಿ ಕಡಿತ
ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 31,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಮೀಡ್‌ನೈಟ್ ಬ್ಲೂ, ಆಲೀವ್ ಹಾಗೂ ವೈಲೇಟ್ ಗ್ಲೋ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್ 6.7 ಇಂಚಿನ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು ಅತ್ಯುತ್ತಮ ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 1,900 nits ಬ್ರೈಟ್ನೆಸ್ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ. ಹಾಗೆಯೇ ಇದು Exynos 1580 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP67 ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A56 ಸ್ಮಾರ್ಟ್‌ಫೋನ್ ಹಿಂಬದಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 12MP ಮತ್ತು 5MP ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 12MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
