Samsung Galaxy A56 ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ! ಟ್ರಿಪಲ್‌ ಕ್ಯಾಮೆರಾ ರಚನೆ ಸೌಲಭ್ಯ

HIGHLIGHTS

ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಫೋನಿಗೆ ಭಾರೀ ಕೊಡುಗೆ

ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಪಡೆದುಕೊಂಡಿದೆ

ಸ್ಯಾಮ್‌ಸಂಗ್‌ನ ಈ ಫೋನ್‌ Exynos 1580 ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ

ಅಮೆಜಾನ್‌ ತಾಣವು ಆಯೋಜಿಸಿರುವ Amazon Great Freedom Sale 2026 ಮಾರಾಟದಲ್ಲಿ ಆಯ್ದ ಮೊಬೈಲ್‌ಗಳು ಬೊಂಬಾಟ್‌ ರಿಯಾಯಿತಿ ಪಡೆದಿವೆ. ಅವುಗಳ ಪೈಕಿ ಮೀಡ್‌ರೇಂಜ್‌ನ Samsung Galaxy A56 ಮೊಬೈಕ್‌ ಸಹ ಭಾರೀ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್‌ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್‌ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಅಂದಹಾಗೆ ಈ ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 5,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್‌ ಗ್ರೇಟ್ ಫ್ರೀಡಂ ಸೇಲ್‌ 2026 ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಫೋನಿಗೆ ಲಭ್ಯ ಇರುವ ಆಫರ್‌ ಹಾಗೂ ಫೋನಿನ ಫೀಚರ್ಸ್‌ ಮುಂದೆ ತಿಳಿಯೋಣ.

Also Read : Amazon Great Freedom Sale: ಆಫರ್‌ನಲ್ಲಿ ಶಿಯೋಮಿ 17T ಮೊಬೈಲ್‌ ಖರೀದಿಗೆ ಇದುವೇ ಸಕಾಲ

Samsung Galaxy A56 ಮೊಬೈಲ್‌ ಬೆಲೆಯಲ್ಲಿ ಕಡಿತ

ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಮೊಬೈಲ್‌ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಆಯೋಜಿಸಿರುವ ಸೇಲ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 31,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಮೀಡ್‌ನೈಟ್‌ ಬ್ಲೂ, ಆಲೀವ್ ಹಾಗೂ ವೈಲೇಟ್ ಗ್ಲೋ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಈ ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್ 6.7 ಇಂಚಿನ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು ಅತ್ಯುತ್ತಮ ಪಿಕ್ಸೆಲ್‌ ರೆಸಲ್ಯೂಶನ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್‌ ರೇಟ್‌ ಸೌಲಭ್ಯದ ಜೊತೆಗೆ 1,900 nits ಬ್ರೈಟ್ನೆಸ್‌ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆ ಹೊಂದಿದೆ. ಹಾಗೆಯೇ ಇದು Exynos 1580 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP67 ರೇಟಿಂಗ್‌ ಸೌಲಭ್ಯ ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್ ಹಿಂಬದಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 12MP ಮತ್ತು 5MP ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 12MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :