Samsung Galaxy A57 5G ಮತ್ತು Galaxy A37 5G ಈಗ ಪ್ರೀ-ಆರ್ಡರ್‌ಗೆ ಲಭ್ಯ! ಬೆಲೆ ನೋಡಿ

HIGHLIGHTS

ಈ ಎರಡು ಫೋನ್‌ಗಳು ಈಗ ಪ್ರೀ-ಆರ್ಡರ್‌ಗೆ ಲಭ್ಯ ಇವೆ

ಸ್ಯಾಮ್‌ಸಂಗ್‌ನ ಈ ಎರಡು ಮೊಬೈಲ್‌ಗಳು ಟ್ರಿಪಲ್‌ ಕ್ಯಾಮೆರಾ ಹೊಂದಿವೆ

ಸ್ಯಾಮ್‌ಸಂಗ್‌ನ ಈ ನೂತನ ಫೋನ್‌ಗಳು 5,000mAh ಬ್ಯಾಟರಿ ಒಳಗೊಂಡಿವೆ

ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ Samsung Galaxy A57 5G ಮತ್ತು Samsung Galaxy A37 5G ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ಗಳು ಇದೀಗ Pre-order ಮಾಡಲು ಲಭ್ಯ ಇವೆ. ಅಂದಹಾಗೆ ಗ್ಯಾಲಕ್ಸಿ A37 5G ಫೋನ್‌ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದೆ. ಅದೇ ರೀತಿ ಗ್ಯಾಲಕ್ಸಿ A57 5G ಮೊಬೈಲ್‌ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದೆ. ಇನ್ನು ಈ ಎರಡು ಫೋನ್‌ಗಳು 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿವೆ. ಹಾಗಾದರೆ ಗ್ಯಾಲಕ್ಸಿ A37 5G ಹಾಗೂ ಗ್ಯಾಲಕ್ಸಿ A57 5G ಮೊಬೈಲ್‌ಗಳ ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಏಪ್ರಿಲ್‌ 2 ರಂದು Vivo V70 FE ಸ್ಮಾರ್ಟ್‌ಫೋನ್‌ ಬಿಡುಗಡೆ! ಕುತೂಹಲ ಹೆಚ್ಚಿಸಿದ ಫೀಚರ್ಸ್

Samsung Galaxy A57 ಮತ್ತು Galaxy A37 5G ಪ್ರೀ-ಆರ್ಡರ್‌ ಲಭ್ಯ

ಹೊಸ ಗ್ಯಾಲಕ್ಸಿ A37 5G ಹಾಗೂ ಗ್ಯಾಲಕ್ಸಿ A57 5G ಸ್ಮಾರ್ಟ್‌ಫೋನ್‌ಗಳು ಈಗ ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್‌ ಇ ಕಾಮರ್ಸ್‌ ತಾಣಗಳಲ್ಲಿ Pre-order ಗೆ ಲಭ್ಯ ಇವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್‌ನ ಆರಂಭಿಕ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 56,999 ರೂ.ಗಳು ಆಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 62,999 ರೂ.ಗಳು ಆಗಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 41,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 47,999 ರೂ.ಗಳು ಆಗಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್‌ 52,999 ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಫೀಚರ್ಸ್‌

ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್‌ 6.7 FHD+ Super AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ One UI 8.5 ಬೆಂಬಲಿತ ಆಂಡ್ರಾಯ್ಡ್‌ 16 ಓಎಸ್‌ ಕೆಲಸ ಮಾಡಲಿವೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 12 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಫೋನ್‌ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಫೀಚರ್ಸ್‌

ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ 6.7 ಇಂಚಿನ FHD+ ಸೂಪರ್ AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ ಆಂಡ್ರಾಯ್ಡ್‌ 16 ಓಎಸ್‌ ಜೊತೆಗೆ Exynos 1680 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಗ್ಯಾಲಕ್ಸಿ A37 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 12 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ 5,000mAh ಬ್ಯಾಟರಿ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :