ಸ್ಯಾಮ್‌ಸಂಗ್‌ನ ನೂತನ Samsung Galaxy A57 ಮತ್ತು Galaxy A37 ಮೊಬೈಲ್‌ಗಳು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿವೆ. ಅಂದಹಾಗೆ ಈ ಮೊಬೈಲ್‌ಗಳು ನಾಳೆ (ಏಪ್ರಿಲ್ 10 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್ ಪ್ರಾರಂಭ ಮಾಡಲಿವೆ. ಈ ನೂತನ ಮೊಬೈಲ್‌ಗಳು 50MP ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಒಳಗೊಂಡಿರುವ ಜೊತೆಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ಗಳ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಟೆಲಿಕಾಂನ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಮಾಹಿತಿ ಇಲ್ಲಿದೆ ನೋಡಿ!
ಇತ್ತೀಚಿಗೆ ಬಿಡುಗಡೆ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್‌ಗಳು ಈಗಾಗಲೇ ಗ್ರಾಹಕರ ಗಮನ ಸೆಳೆದಿವೆ. ಇನ್ನು ಈ ಸ್ಮಾರ್ಟ್‌ಫೋನ್ಗಳು ನಾಳೆ (ಏಪ್ರಿಲ್ 10 ರಂದು) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಮಾರಾಟಕ್ಕೆ ಬರಲಿವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್‌ನ ಆರಂಭಿಕ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 56,999 ರೂ.ಗಳು ಆಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 62,999 ರೂ.ಗಳು ಆಗಿದೆ.
ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್‌ನ ಆರಂಭಿಕ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 41,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 47,999 ರೂ.ಗಳು ಆಗಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್ 52,999 ರೂ.ಗಳ ಪ್ರೈಸ್‌ಟ್ಯಾಗ್ ಹೊಂದಿದೆ.
ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್ 6.7 ಇಂಚಿನ FHD+ ಸೂಪರ್ AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ One UI 8.5 ಬೆಂಬಲಿತ ಆಂಡ್ರಾಯ್ಡ್ 16 ಓಎಸ್ ಜೊತೆಗೆ Exynos 1680 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ನೀರು ಮತ್ತು ಧೂಳು ನಿರೋಧಕಕ್ಕಾಗಿ ಈ ಮೊಬೈಲ್ IP68 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A37 5G ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 8MP ಅಲ್ಟ್ರಾ ವೈಡ್ ಮತ್ತು 5MP ಮೈಕ್ರೋ ಸೆನ್ಸಾರ್ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 12 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಮೊಬೈಲ್ 6.7 FHD+ Super AMOLED ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಮತ್ತು ವಿಷನ್ ಬೂಸ್ಟರ್ ಸೌಲಭ್ಯ ಅನ್ನು ಪಡೆದಿದೆ. ಇದರೊಂದಿಗೆ One UI 8.5 ಬೆಂಬಲಿತ ಆಂಡ್ರಾಯ್ಡ್ 16 ಓಎಸ್ ಕೆಲಸ ಮಾಡಲಿವೆ. ಅಲ್ಲದೇ ನೀರು ಮತ್ತು ಧೂಳು ನಿರೋಧಕಕ್ಕಾಗಿ ಈ ಮೊಬೈಲ್ IP68 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A57 5G ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 12MP ಮತ್ತು 5MP ಸೆನ್ಸಾರ್ ಪವರ್‌ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 12 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ 5,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.