Samsung Galaxy F17 5G in Kannada
ಭಾರತೀಯ ಮಾರುಕಟ್ಟೆಯಲ್ಲಿ Samsung Galaxy F17 5G ಎಂಬ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸ್ಯಾಮ್‌ಸಂಗ್ ನೆನ್ನೆ ಅಂದರೆ 11ನೇ ಸೆಪ್ಟೆಂಬರ್ 2025 ರಂದು ಭಾರತದಲ್ಲಿ ಹೊಸ Galaxy F17 5G ಸ್ಮಾರ್ಟ್‌ಫೋನ್ ಅನ್ನು ಬಜೆಟ್ ಖರೀದಿದಾರರಿಗೆ ಬಿಡುಗಡೆ ಮಾಡಿದೆ. ಇದು ಧೂಳು ಮತ್ತು ನೀರಿನ ಸ್ಪ್ಲಾಶ್‌ಗಳ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಹೊಂದಿದೆ. ಈ Galaxy F17 5G ಜೆಮಿನಿ ಲೈವ್ ಜೊತೆಗೆ ಸರ್ಕಲ್ ಟು ಸರ್ಚ್‌ನೊಂದಿಗೆ ಬರುತ್ತದೆ. ಇದರ ಬೆಲೆಯೂ ಕಡಿಮೆಯಾಗಿದ್ದು ಬಿಡುಗಡೆಯ ಸಂದರ್ಭದಲ್ಲಿ ಈ ಫೋನ್‌ನ ಮೇಲೆ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ.
ಈ ಫೋನ್‌ನ 4GB RAM ಮತ್ತು 128GB ಸ್ಟೋರೇಜ್ ಮಾದರಿಯ ಬೆಲೆ ರೂ. 14,499 ಆದರೆ 6GB RAM ಮತ್ತು 128GB ಸ್ಟೋರೇಜ್ ಮಾದರಿಯ ಬೆಲೆ ರೂ. 15,999 ರೂಗಳಾಗಿವೆ. ಈ ಫೋನ್ ಅನ್ನು ಎಲ್ಲಾ ಪ್ರಮುಖ ಚಿಲ್ಲರೆ ಅಂಗಡಿಗಳಲ್ಲಿ ಹಾಗೂ ಸ್ಯಾಮ್‌ಸಂಗ್‌ನ ಆನ್‌ಲೈನ್ ಸ್ಟೋರ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು ಈ ಫೋನ್ ಅನ್ನು HDFC ಬ್ಯಾಂಕ್ ಕಾರ್ಡ್‌ಗಳೊಂದಿಗೆ ಅಥವಾ UPI ಮೂಲಕ ಖರೀದಿಸಿದರೆ ನಿಮಗೆ ರೂ. 500 ಕ್ಯಾಶ್‌ಬ್ಯಾಕ್ ಸಿಗುತ್ತದೆ. ಅಲ್ಲದೆ 6 ತಿಂಗಳವರೆಗೆ ಯಾವುದೇ ವೆಚ್ಚವಿಲ್ಲದ EMI ಸೌಲಭ್ಯವೂ ಇದೆ.
Also Read: boAt Cinematic Dolby Soundbar ಇಂದು ಅಮೆಜಾನ್ ‘Early Deals’ ಸೇಲ್‌ನಲ್ಲಿ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!
ಈ Galaxy F17 5G ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಇದು ಪೂರ್ಣ HD ಪ್ಲಸ್ ರೆಸಲ್ಯೂಶನ್ ಮತ್ತು 90Hz ರಿಫ್ರೆಶ್ ದರವನ್ನು ನೀಡುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ F17 5G ಫೋನ್ ಅನ್ನು ವೈಲೆಟ್ ಪಾಪ್ ಮತ್ತು ನಿಯೋ ಬ್ಲಾಕ್ ಬಣ್ಣಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನ್ ಹಿಂಭಾಗದಲ್ಲಿ 50MP ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 5MP ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು 2MP ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಆದ್ದರಿಂದ ಹಿಂಭಾಗದಲ್ಲಿ ಒಟ್ಟು ಮೂರು ಕ್ಯಾಮೆರಾಗಳಿವೆ. ಮುಂಭಾಗದಲ್ಲಿ 13MP ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ.
ಈ ಫೋನ್ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ಅನ್ನು ಪಡೆಯುತ್ತದೆ. ಇದು 6 ವರ್ಷಗಳವರೆಗೆ 6 OS ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಒದಗಿಸುತ್ತದೆ. ಈ ಫೋನ್ Exynos 1330 ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಹೈಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್ ಲಭ್ಯವಿದೆ. ಬದಿಯಲ್ಲಿ ಫಿಂಗರ್‌ಪ್ರಿಂಟ್ ಸೆನ್ಸರ್ ನೀಡಲಾಗಿದೆ. ಈ ಫೋನ್ 5000mAh ನ ದೊಡ್ಡ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು USB ಟೈಪ್ C ಆಡಿಯೊವನ್ನು ಬೆಂಬಲಿಸುತ್ತದೆ. ಡ್ಯುಯಲ್ 4G VoLTE ವೈಶಿಷ್ಟ್ಯವು ಸಹ ಲಭ್ಯವಿದೆ. ಡ್ಯುಯಲ್ ಬ್ಯಾಂಡ್ ವೈಫೈ, ಬ್ಲೂಟೂತ್ 5.3, USB ಟೈಪ್ C, ಮತ್ತು NFC ನಂತಹ ಹೆಚ್ಚುವರಿ ವೈಶಿಷ್ಟ್ಯಗಳನ್ನು ಸಹ ಒದಗಿಸಲಾಗಿದೆ.
Also Read: iPhone 16 Series Price Cut: ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್ ಮಾರಾಟದಲ್ಲಿ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!