Samsung Galaxy F36 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ! ಟ್ರಿಪಲ್ ಕ್ಯಾಮೆರಾ ಸೌಲಭ್ಯ
ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ 5,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ Samsung Galaxy F36 5G ಮೊಬೈಲ್ ಉತ್ತಮ ಕ್ಯಾಮೆರಾ ಫೀಚರ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Exynos 1380 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ವೈಲೇಟ್, ರೆಡ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 68W ಟರ್ಬೊಪವರ್ ಚಾರ್ಜಿಂಗ್ ಇರುವ Motorola Edge 70 Fusion ಫೋನ್ ಬೆಲೆಯಲ್ಲಿ ಇಳಿಕೆ!
Samsung Galaxy F36 5G ಬೆಲೆಯಲ್ಲಿ ಭಾರೀ ಕಡಿತ
ಅತ್ಯುತ್ತಮ ಕ್ಯಾಮೆರಾ, ಆಕರ್ಷಕ ಲುಕ್ ಸೇರಿದಂತೆ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 25,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 19,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ವೈಲೇಟ್, ರೆಡ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ 6.7 ಇಂಚಿನ ಪೂರ್ಣ HD+ ಸೂಪರ್ AMOLED ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ Samsung Exynos 1380 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ನೀಡುತ್ತದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿರುವ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನೆರಡು ಕ್ಯಾಮೆರಾಗಳು ಕ್ರಮವಾಗಿ 8MP ಹಾಗೂ 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 13MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 15 ಆವೃತ್ತಿ ಆಧಾರಿತ One UI 7 ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ 6 OS ಅಪ್‌ಗ್ರೇಡ್‌ಗಳು ಮತ್ತು 7 ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
