Samsung Galaxy F36 5G ಖರೀದಿ ಮಾಡಲು ಇದೇ ಬೆಸ್ಟ್‌ ಚಾನ್ಸ್‌! ಆಫರ್‌ ನೋಡಿ

HIGHLIGHTS

ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಬೆಲೆ ಇಳಿಕೆ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ 13MP ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಫೋನ್‌ 5000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ

ಪ್ರಸ್ತುತ ಇ ಕಾಮರ್ಸ್‌ ತಾಣಗಳು ಗ್ರಾಹಕರನ್ನು ಸೆಳೆಯಲು ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಕೊಡುಗೆ ಘೋಷಿಸುತ್ತವೆ. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್‌ನ Samsung Galaxy F36 5G ಸ್ಮಾರ್ಟ್‌ಫೋನ್‌ ಬೊಂಬಾಟ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಮೊಬೈಲ್‌ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಗ್ರಾಹಕರು ಈ ಫೋನ್‌ ಅನ್ನು ವೈಲೇಟ್, ರೆಡ್ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : ದಿ ರಿಯಲ್ ಹೀರೋ Redmi 15A 5G ಲಾಂಚ್‌ಗೆ ಮುಹೂರ್ತ ಫಿಕ್ಸ್‌! ಅಚ್ಚರಿಯ ಫೀಚರ್ಸ್‌

Samsung Galaxy F36 5G ಬೆಲೆಯಲ್ಲಿ ಭಾರೀ ಇಳಿಕೆ

ಜನಪ್ರಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ವೇರಿಯಂಟ್‌ ಬೆಲೆ 22,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ವೈಲೇಟ್, ರೆಡ್ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಫೀಚರ್ಸ್‌ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಮೊಬೈಲ್‌ 6.7 ಇಂಚಿನ ಪೂರ್ಣ HD+ ಸೂಪರ್ AMOLED ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ Samsung Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ 5000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ನೀಡುತ್ತದೆ.

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿರುವ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನೆರಡು ಕ್ಯಾಮೆರಾಗಳು ಕ್ರಮವಾಗಿ 8MP ಹಾಗೂ 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 13MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 15 ಆವೃತ್ತಿ ಆಧಾರಿತ One UI 7 ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ 6 OS ಅಪ್‌ಗ್ರೇಡ್‌ಗಳು ಮತ್ತು 7 ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :