Samsung Galaxy F36 5G ಮೊಬೈಲ್ ಈಗ ಕಡಿಮೆ ಬೆಲೆಯಲ್ಲಿ ಲಭ್ಯ! ಖರೀದಿಗೆ ಯೋಗ್ಯವೇ?
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 ಮೊಬೈಲ್ 5000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 ಫೋನ್ Samsung Exynos 1380 ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಫೋನ್ ವೈಲೇಟ್, ರೆಡ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯ
ಡಿಸ್ಕೌಂಟ್ ಬೆಲೆಯಲ್ಲಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ಫೋನ್ ಖರೀದಿ ಮಾಡಬೇಕೆ? ಹಾಗಿದ್ರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸಿಗಲಿದೆ ಅತ್ಯುತ್ತಮ ಆಫರ್. ಹೌದು, ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ Samsung Galaxy F36 5G ಮೊಬೈಲ್‌ಗೆ ಗಮನಾರ್ಹ ಡಿಸ್ಕೌಂಟ್ ಘೋಷಣೆ ಮಾಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ Samsung Exynos 1380 ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಕೆಲಸ ಮಾಡಲಿದೆ. ಇದರೊಂದಿಗೆ OIS ಬೆಂಬಲಿತ 50MP ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಫೋನಿಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Jio ಈ ಪ್ಲಾನ್‌ನಲ್ಲಿ ಸಿಗುತ್ತೆ 90 ದಿನಗಳ ವ್ಯಾಲಿಡಿಟಿ 20GB Data ಉಚಿತ
Samsung Galaxy F36 5G ಮೊಬೈಲ್‌ಗೆ ಭರ್ಜರಿ ಡಿಸ್ಕೌಂಟ್
ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ವೇರಿಯಂಟ್ ಬೆಲೆ 22,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 19,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ವೈಲೇಟ್, ರೆಡ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ ಫೀಚರ್ಸ್ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ 6.7 ಇಂಚಿನ ಪೂರ್ಣ HD+ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಮೊಬೈಲ್ Samsung Exynos 1380 ಚಿಪ್‌ಸೆಟ್ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಒದಗಿಸಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F36 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿರುವ 50MP ಸೆನ್ಸಾರ್‌ನಲ್ಲಿ ಇದೆ. ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8MP ಹಾಗೂ 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 13MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 15 ಆವೃತ್ತಿ ಆಧಾರಿತ One UI 7 ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ 6 OS ಅಪ್‌ಗ್ರೇಡ್‌ಗಳು ಮತ್ತು 7 ವರ್ಷಗಳ ಭದ್ರತಾ ನವೀಕರಣಗಳನ್ನು ನೀಡುತ್ತದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile