ಮಾರುಕಟ್ಟೆಯಲ್ಲಿ ಈಗಾಗಲೇ ಸದ್ದು ಮಾಡಿರುವ Samsung Galaxy F36 ಮೊಬೈಲ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಫೋನ್‌ಗೆ ಬಿಗ್ ಡಿಸ್ಕೌಂಟ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಮೊಬೈಲ್‌ 5,000mAh ಬ್ಯಾಟರಿ ಸಪೋರ್ಟ್ ಪಡೆದಿದೆ

ಸ್ಯಾಮ್‌ಸಂಗ್‌ನ ಈ ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಸ್ಯಾಮ್‌ಸಂಗ್‌ ಕಂಪನಿಯ F ಸರಣಿಯ ಜನಪ್ರಿಯ ಮೊಬೈಲ್‌ಗಳಲ್ಲಿ ಒಂದಾದ Samsung Galaxy F36 ಸ್ಮಾರ್ಟ್‌ಫೋನ್‌ ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ Samsung Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್‌ 5,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ವೈಲೇಟ್, ರೆಡ್ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಫೀಚರ್‌ ಫೋನ್ ಬಳಕೆದಾರರಿಗೆ PhonePe ಗುಡ್‌ನ್ಯೂಸ್‌: ಇಂಟರ್ನೆಟ್‌ ಇಲ್ಲದೇ UPI ಪಾವತಿ

Samsung Galaxy S25 ಬೆಲೆಯಲ್ಲಿ ಈಗ ಇಳಿಕೆ

ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಮೊಬೈಲ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 25,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 22,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್‌ ವೈಲೇಟ್, ರೆಡ್ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 ಮೊಬೈಲ್‌ 6.7 ಇಂಚಿನ ಪೂರ್ಣ HD+ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಮೊಬೈಲ್‌ Samsung Exynos 1380 ಚಿಪ್‌ಸೆಟ್‌ ಪ್ರೊಸೆಸರ್‌ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 6GB RAM + 128GB, 8GB RAM + 128GB ಹಾಗೂ 8GB RAM + 256GB ಸ್ಟೋರೇಜ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಒದಗಿಸಿದೆ.

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F36 5G ಮೊಬೈಲ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಹೊಂದಿರುವ 50MP ಸೆನ್ಸಾರ್‌ನಲ್ಲಿ ಇದೆ. ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8MP ಹಾಗೂ 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 13MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದು ಆಂಡ್ರಾಯ್ಡ್ 15 ಆವೃತ್ತಿ ಆಧಾರಿತ One UI 7 ಸಪೋರ್ಟ್‌ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :