Samsung Galaxy F55 5G Price Cut: ಸ್ಯಾಮ್‌ಸಂಗ್ ಭಾರತದಲ್ಲಿ ಇನ್ನೂ ಹೆಚ್ಚು ಜನರು ಕಣ್ಮುಂಚಿಕೊಂಡು ಭರವಸೆ ಮಾಡುವ ಅತ್ಯುತ್ತಮ ಬ್ರಾಂಡ್ಗಳಲ್ಲಿ ಒಂದಾಗಿದೆ. ಸ್ಯಾಮ್‌ಸಂಗ್ ಈಗ ತನ್ನ ಲೇಟೆಸ್ಟ್ Samsung Galaxy F55 5G ಸ್ಮಾರ್ಟ್ಫೋನ್ ಬೆಲೆಯಲ್ಲಿ ಹೆಚ್ಚಾಗಿ ಇಳಿಸಿದೆ. ಈ ಸ್ಮಾರ್ಟ್ಫೋನ್ ಲೇಟೆಸ್ಟ್ ಫೀಚರ್ಗಳೊಂದಿಗೆ ಲೋಡ್ ಆಗಿದ್ದು ಬ್ಯಾಂಕ್ ಆಫರ್ ಜೊತೆಗೆ ಬರೋಬ್ಬರಿ 10,000 ರೂಗಳಷ್ಟು ಕಡಿಮೆ ಬೆಲೆಯಲ್ಲಿ ಖರೀದಿಸಲು ಲಭ್ಯವಿದೆ. ಪ್ರಸ್ತುತ ಸ್ಮಾರ್ಟ್ಫೋನ್ ಆರಂಭಿಕ ರೂಪಾಂತರದ ಮೇಲೆ 8000 ರೂಗಳ ಬೆಲೆ ಕಡಿಮೆಗೊಳಿಸಿದ್ದು ಬ್ಯಾಂಕ್ ಆಫರ್ ಅಡಿಯಲ್ಲಿ 2000 ರೂಗಳ ಡಿಸ್ಕೌಂಟ್ ಸಹ ನೀಡುತ್ತಿದೆ.
Survey
✅ Thank you for completing the survey!
Samsung Galaxy F55 5G Price Cut
ಪ್ರಸ್ತುತ ಫ್ಲಿಪ್ಕಾರ್ಟ್ ಈಗ Samsung Galaxy F55 5G ಸ್ಮಾರ್ಟ್ಫೋನ್ ಮೇಲೆ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಫೋನ್‌ನ ಬೆಲೆ ಫ್ಲಿಪ್‌ಕಾರ್ಟ್‌ನಲ್ಲಿ ₹20,999 ರೂಗಳಿಗೆ ಮತ್ತಿ ಮಾಡಲಾಗಿದೆ. ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಫೋನ್‌ನ ಬೆಲೆ ₹23,999 ರೂಗಳಿಗೆ ಮತ್ತು ಕೊನೆಯದಾಗಿ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಫೋನ್‌ನ ಬೆಲೆ ₹26,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಅಲ್ಲದೆ ಆಫರ್‌ಗಳ ಬಗ್ಗೆ ಮಾತನಾಡುವುದಾದರೆ ಪ್ರಸ್ತುತ 8,000 ರೂ.ಗಳ ರಿಯಾಯಿತಿಯೊಂದಿಗೆ ಖರೀದಿಸಲು ಪಟ್ಟಿ ಮಾಡಲಾಗಿದೆ.
ಅದರೊಂದಿಗೆ ಐಸಿಐಸಿಐ ಬ್ಯಾಂಕ್ ಕಾರ್ಡ್ ಮೂಲಕ ಈ ಫೋನ್ ಮೇಲೆ 3000 ರೂ.ಗಳ ರಿಯಾಯಿತಿ ಕೊಡುಗೆ ಲಭ್ಯವಿದೆ. ಹೆಚ್ಚಿನ ಕೊಡುಗೆಗಳು ಮತ್ತು ಮಾಹಿತಿಗಾಗಿ ಫ್ಲಿಪ್‌ಕಾರ್ಟ್‌ಗೆ ಭೇಟಿ ನೀಡಬಹುದಾಗಿದ್ದು ಕೊಡುಗೆಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Samsung Galaxy F55 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು ₹25,950 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು.
Samsung Galaxy F55 5G ಫೋನ್ 6.7 ಇಂಚಿನ ಪೂರ್ಣ HD+ ಡಿಸ್ಪ್ಲೇಯನ್ನು ಹೊಂದಿದ್ದು 120Hz ರಿಫ್ರೆಶ್ ದರವನ್ನು ಹೊಂದಿದೆ. ವೇಗ ಮತ್ತು ಬಹುಕಾರ್ಯಕಕ್ಕಾಗಿ ಈ ಫೋನ್ ಸ್ನಾಪ್‌ಡ್ರಾಗನ್ ಜೆನ್ 1 ಪ್ರೊಸೆಸರ್ ಅನ್ನು ಹೊಂದಿದೆ. ಅಲ್ಲದೆ ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ.
Samsung Galaxy F55 5G ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಸೆಟಪ್ 50MP ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ. ಅದರೊಂದಿಗೆ ಈ ಸೆಟಪ್ 8MP ಸೆಕೆಂಡರಿ ಮತ್ತು 2MP ಮೂರನೇ ಕ್ಯಾಮೆರಾವನ್ನು ಒಳಗೊಂಡಿದೆ. ಆಕರ್ಷಕ ಸೆಲ್ಫಿಗಳು ಮತ್ತು ವೀಡಿಯೊ ಕರೆಗಾಗಿ 50MP ಮುಂಭಾಗದ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಬ್ಯಾಟರಿಯ ಬಗ್ಗೆ ಹೇಳುವುದಾದರೆ ಈ ಫೋನ್ 5000mAh ಬ್ಯಾಟರಿಯನ್ನು ಹೊಂದಿದ್ದು ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile