Samsung Galaxy F70 5G launched
ಸ್ಯಾಮ್ಸಂಗ್ ಕಂಪನಿಯು ದೀಪಾವಳಿ ಹಬ್ಬದ ಮುನ್ನವೇ ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಹೊಸದಾಗಿ Samsung Galaxy F70 5G ಸ್ಮಾರ್ಟ್ಫೋನ್ ಅನ್ನು ಸದ್ದಿಲ್ಲದೆ ಲಾಂಚ್ ಮಾಡಿದೆ. ಈ ನೂತನ ಸ್ಮಾರ್ಟ್ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 1330 ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ F ಸರಣಿಯ ಈ ಫೋನ್ 5,000mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಸೌಲಭ್ಯ ಒಳಗೊಂಡಿದೆ. ಇದರ ಡಿಸ್ಪ್ಲೇಯು sAMOLED ಮಾದರಿಯಲ್ಲಿ ಇದೆ. ಅಲ್ಲದೇ ಈ ಮೊಬೈಲ್ ಎರಡು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಎಂಟ್ರಿ ಕೊಟ್ಟಿದೆ. ಹಾಗಾದರೆ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ನ ಬೆಲೆ, ಫೀಚರ್ಸ್ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vivo ಕಂಪನಿಯ ಈ ಸ್ಟೈಲಿಶ್ ಸ್ಮಾರ್ಟ್ಫೋನ್ ಬೆಲೆಯಲ್ಲಿ ಜಬರ್ದಸ್ತ್ ಇಳಿಕೆ! ಟ್ರಿಪಲ್ ಕ್ಯಾಮೆರಾ ಸೌಲಭ್ಯ
ಮಾರುಕಟ್ಟೆ ಪ್ರವೇಶಿಸಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ ಬಜೆಟ್ ದರದ ಪ್ರೈಸ್ಟ್ಯಾಗ್ ಪಡೆದಿದ್ದು ಈ ಮೂಲಕ ಗ್ರಾಹಕರ ಗಮನ ಸೆಳೆದಿವೆ. ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ನ ಆರಂಭಿಕ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 19,999 ರೂ.ಗಳು ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 22,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಬೋಲ್ಡ್ ಬ್ಲ್ಯಾಕ್ ಮತ್ತು ವಿವಿಡ್ ವಯಲೆಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಈ ಸ್ಮಾರ್ಟ್ಫೋನ್ ಅಕ್ಟೋಬರ್ 20 ರಂದು ಭಾರತದಲ್ಲಿ ಮಾರಾಟಕ್ಕೆ ಲಭ್ಯ.
ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ 6.7 ಇಂಚಿನ ಫುಲ್-HD+ ಇನ್ಫಿನಿಟಿ-ಯು sAMOLED ಹೊಂದಿದೆ. ಹಾಗೆಯೇ 90Hz ವರೆಗೆ ರಿಫ್ರೆಶ್ ರೇಟ್ ಮತ್ತು ಇದರ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ. ಇದರೊಂದಿಗೆ ಆಕ್ಟಾ-ಕೋರ್ ಎಕ್ಸಿನೋಸ್ 1330 (Exynos 1330) ಚಿಪ್ಸೆಟ್ ಪ್ರೊಸೆಸರ್ ಒಳಗೊಂಡಿದ್ದು, ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಸಿಂಚನದಿಂದ ರಕ್ಷಣೆಗಾಗಿ ಈ ಮೊಬೈಲ್ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್ ಪವರ್ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 13 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.