ನಾಳೆಯಿಂದ Samsung ಕಂಪನಿಯ ಈ ಹೊಸ ಮೊಬೈಲ್‌ ಮಾರಾಟ ಶುರು! ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ

Updated on 16-Feb-2026
HIGHLIGHTS

ಸ್ಯಾಮ್‌ಸಂಗ್‌ನ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ

ಈ ಫೋನ್‌ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್‌ ಆಯ್ಕೆ ಪಡೆದಿದೆ

ಈ ನೂತನ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದೆ

Samsung ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ Samsung Galaxy F70e 5G ಮೊಬೈಲ್‌ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ನಾಳೆಯಿಂದ (ಫೆಬ್ರವರಿ 17 ರಿಂದ) ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಇದು ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಆಕರ್ಷಕ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e ಫೋನ್‌ ಮಾರಾಟ ದಿನಾಂಕ, ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಇಂದಿನಿಂದ Oppo K14x 5G ಮೊಬೈಲ್‌ ಸೇಲ್‌ ಪ್ರಾರಂಭ! ಬಜೆಟ್‌ ಬೆಲೆಯಲ್ಲಿ 50MP ಕ್ಯಾಮೆರಾ ಸ್ಮಾರ್ಟ್‌ಫೋನ್‌

Samsung Galaxy F70e 5G ಬೆಲೆ ಮತ್ತು ಲಭ್ಯತೆ

ಹೊಸ Samsung Galaxy F70e 5G ಮೊಬೈಲ್‌ ನಾಳೆಯಿಂದ (ಫೆಬ್ರವರಿ 17 ರಂದು) ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣ ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ ರೂ. 12,999 ಆಗಿದ್ದರೆ ಇದರ 6GB RAM + 128GB ಸ್ಟೋರೇಜ್ ಹೊಂದಿರುವ ಆವೃತ್ತಿಯ ಬೆಲೆ ರೂ. 14,999 ಆಗಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್‌ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್‌ ಆಯ್ಕೆ ಪಡೆದುಕೊಂಡಿದೆ.

Samsung Galaxy F70e 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಕಂಪನಿಯ ಈ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು, ಇದರ ಸ್ಕ್ರೀನ್‌ 720×1,600 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಯಾಮ್‌ಸಂಗ್‌ನ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು ಇದಕ್ಕೆ ಬೆಂಬಲಿತ ಚಾರ್ಜಿಂಗ್‌ ಸೆಟ್‌ಅಪ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ದ್ವಿತೀಯ ಕ್ಯಾಮೆರಾ 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಅಂದಹಾಗೆ 167.4×77.4×8.2mm ಸುತ್ತಳತೆ ಹೊಂದಿರುವ ಈ ಮೊಬೈಲ್‌ 199g ತೂಕ ಪಡೆದುಕೊಂಡಿದೆ. ಹಾಗೆಯೇ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿರುವ ಈ ಫೋನ್‌ 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :