ಹೊಸದಾಗಿ ಬಿಡುಗಡೆ ಆಗಿರುವ Samsung Galaxy F70 5G ಸ್ಮಾರ್ಟ್ಫೋನ್ ಬಜೆಟ್ ದರದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್ ಇಂದಿನಿಂದ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಶುರು ಮಾಡಿದೆ. ಈ ನೂತನ ಮೊಬೈಲ್ ಎಕ್ಸಿನೋಸ್ 1330 ಚಿಪ್ಸೆಟ್ ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್ನ ಡಿಸ್ಪ್ಲೇಯು 90Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಅಲ್ಲದೇ ಈ ಮೊಬೈಲ್ ರೋಗ್ ರೆಡ್ ಬಣ್ಣದಲ್ಲಿ ಲಭ್ಯವಿದೆ. ಇದು ಬೋಲ್ಡ್ ಬ್ಲ್ಯಾಕ್ ಮತ್ತು ವಿವಿಡ್ ವಯಲೆಟ್ ಕಲರ್ ಆಯ್ಕೆಯನ್ನು ಹೊಂದಿದೆ. ಹಾಗಾದರೇ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಫೋನಿನ ಸೇಲ್, ಬೆಲೆ, ಫೀಚರ್ಸ್ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಆನ್ಲೈನ್ನಲ್ಲಿ ಹೊಸ Smartphone ಖರೀದಿಸುತ್ತಿದ್ದೀರಾ? ಹಾಗಿದ್ರೆ, ಒಮ್ಮೆ ಇಲ್ಲಿ ಗಮನಿಸಿ
ಭಾರತದಲ್ಲಿ ಸ್ಯಾಮ್ಸಂಗ್ನ ನೂತನ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ ಇಂದಿನಿಂದ (ಅ.20) ಫ್ಲಿಪ್ಕಾರ್ಟ್ ಇ ಕಾಮರ್ಸ್ ಮೂಲಕ ಮಾರಾಟ ಪ್ರಾರಂಭಿಸಿದೆ. ಈ ಮೊಬೈಲ್ನ ಆರಂಭಿಕ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 19,999 ರೂ.ಗಳು ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 22,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಬೋಲ್ಡ್ ಬ್ಲ್ಯಾಕ್ ಮತ್ತು ವಿವಿಡ್ ವಯಲೆಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.
ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ 6.7 ಇಂಚಿನ ಫುಲ್-HD+ ಇನ್ಫಿನಿಟಿ-ಯು sAMOLED ಹೊಂದಿದೆ. ಹಾಗೆಯೇ 90Hz ವರೆಗೆ ರಿಫ್ರೆಶ್ ರೇಟ್ ಮತ್ತು ಇದರ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ. ಇದರೊಂದಿಗೆ ಆಕ್ಟಾ-ಕೋರ್ ಎಕ್ಸಿನೋಸ್ 1330 (Exynos 1330) ಚಿಪ್ಸೆಟ್ ಪ್ರೊಸೆಸರ್ ಒಳಗೊಂಡಿದ್ದು, ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಸಿಂಚನದಿಂದ ರಕ್ಷಣೆಗಾಗಿ ಈ ಮೊಬೈಲ್ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್ ಪವರ್ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 13 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.