ನಾಳೆ Samsung Galaxy F70 Pro 5G ಖರೀದಿಗೆ ಲಭ್ಯ; ಫೀಚರ್ಸ್ ಹಾಗೂ ಆಫರ್ ಬೆಲೆ ನೋಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ನಾಳೆ ಖರೀದಿಗೆ ಲಭ್ಯ
ಸ್ಯಾಮ್‌ಸಂಗ್‌ನ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ
ಸ್ಯಾಮ್‌ಸಂಗ್‌ನ ಈ ಮೊಬೈಲ್ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಕಲರ್ ಆಯ್ಕೆ ಹೊಂದಿದೆ
ಇತ್ತೀಚಿನ ಹೊಸ Samsung Galaxy F70 Pro 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಆಗಷ್ಟ್ 8 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಈ ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ ಕ್ರಮವಾಗಿ 6,000mAh ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Amazon Great Freedom Sale: ಆಫರ್‌ನಲ್ಲಿ ಶಿಯೋಮಿ 17T ಮೊಬೈಲ್ ಖರೀದಿಗೆ ಇದುವೇ ಸಕಾಲ
ನಾಳೆ Samsung Galaxy F70 Pro 5G ಸೇಲ್
ದೇಶೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ನಾಳೆ (ಆಗಷ್ಟ್ 8 ರಿಂದ) ಫ್ಲಿಪ್‌ಕಾರ್ಟ್‌ನ ಫ್ಲಿಪ್‌ಕಾರ್ಟ್ ಫ್ರಿಡಂ ಸೇಲ್ ಮೂಲಕ ಖರೀದಿಗೆ ಲಭ್ಯವಾಗಿದೆ. ಈ ನೂತನ ಫೋನಿನ 6GB RAM + 128GB ವೇರಿಯಂಟ್ ಬೆಲೆಯು 23,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 27,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ಬೆಲೆಯು 32,999 ರೂ.ಗಳು ಆಗಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಭಾರತದಲ್ಲಿ ಸೇಲ್‌ಗೆ ಬರಲಿದೆ. ಅಂದಹಾಗೆ ಈ ಮೊಬೈಲ್ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೀಚರ್ಸ್ ಹೀಗಿವೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನ್ 6.7 ಇಂಚಿನ FHD+ ಇನ್ಫಿನಿಟಿ-O ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 720 x 1,600 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಅಲ್ಲದೇ 800 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 2MP + 5MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
