Samsung Galaxy F70 Pro 5G launched in india Price sale date and specification
ಇತ್ತೀಚಿನ ಹೊಸ Samsung Galaxy F70 Pro 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಆಗಷ್ಟ್ 8 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಈ ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ ಕ್ರಮವಾಗಿ 6,000mAh ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Amazon Great Freedom Sale: ಆಫರ್‌ನಲ್ಲಿ ಶಿಯೋಮಿ 17T ಮೊಬೈಲ್ ಖರೀದಿಗೆ ಇದುವೇ ಸಕಾಲ
ದೇಶೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ನಾಳೆ (ಆಗಷ್ಟ್ 8 ರಿಂದ) ಫ್ಲಿಪ್‌ಕಾರ್ಟ್‌ನ ಫ್ಲಿಪ್‌ಕಾರ್ಟ್ ಫ್ರಿಡಂ ಸೇಲ್ ಮೂಲಕ ಖರೀದಿಗೆ ಲಭ್ಯವಾಗಿದೆ. ಈ ನೂತನ ಫೋನಿನ 6GB RAM + 128GB ವೇರಿಯಂಟ್ ಬೆಲೆಯು 23,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 27,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ಬೆಲೆಯು 32,999 ರೂ.ಗಳು ಆಗಿದೆ. ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಭಾರತದಲ್ಲಿ ಸೇಲ್‌ಗೆ ಬರಲಿದೆ. ಅಂದಹಾಗೆ ಈ ಮೊಬೈಲ್ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನ್ 6.7 ಇಂಚಿನ FHD+ ಇನ್ಫಿನಿಟಿ-O ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಜೊತೆಗೆ 720 x 1,600 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಅಲ್ಲದೇ 800 nits ವರೆಗೆ ಗರಿಷ್ಠ ಬ್ರೈಟ್ನೆಸ್ ಸಫೋರ್ಟ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB + 128GB ಹಾಗೂ 8GB + 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 2MP + 5MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಹೊಂದಿದೆ.