ಸದ್ದಿಲ್ಲದೆ ಬಂದೇ ಬಿಡ್ತು Samsung Galaxy F70 Pro 5G ಮೊಬೈಲ್‌! ಫೀಚರ್ಸ್‌ ಹಾಗೂ ಬೆಲೆ ನೋಡಿ

HIGHLIGHTS

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನ್ ಟ್ರಿಪಲ್‌ ಕ್ಯಾಮೆರಾ ಒಳಗೊಂಡಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನ್‌ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಕಲರ್‌ ಆಯ್ಕೆ ಒಳಗೊಂಡಿದೆ

ಜನಪ್ರಿಯ ಸ್ಯಾಮ್‌ಸಂಗ್‌ ಮೊಬೈಲ್‌ ಕಂಪನಿಯು ಹೊಸದಾಗಿ Samsung Galaxy F70 Pro 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಆಗಷ್ಟ್‌ 3 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್‌ ವಿಭಾಗದಲ್ಲಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ. ಅಲ್ಲದೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಇದರೊಂದಿಗೆ ಈ ಫೋನ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಇನ್ನು ಈ ಫೋನ್‌ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಮಾರುಕಟ್ಟೆ ಪ್ರವೇಶಿಸಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್‌ ಬೆಲೆ, ಸೇಲ್‌ ಡೇಟ್ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 45W ಫಾಸ್ಟ್‌ ಸಪೋರ್ಟ್‌ ಇರುವ Oppo ಸಂಸ್ಥೆಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

Samsung Galaxy F70 Pro 5G ಬೆಲೆ ಹಾಗೂ ಲಭ್ಯತೆ

ಸ್ಯಾಮ್‌ಸಂಗ್ ಕಂಪನಿಯ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ನೂತನ ಫೋನಿನ 6GB RAM + 128GB ವೇರಿಯಂಟ್‌ ಬೆಲೆಯು 25,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 29,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್‌ ಬೆಲೆಯು 34,999 ರೂ.ಗಳು ಆಗಿದೆ. ಇನ್ನು ಈ ಫೋನ್‌ ಆಗಸ್ಟ್ 8 ರಂದು ಫ್ಲಿಪ್‌ಕಾರ್ಟ್‌ ಫ್ರಿಡಂ ಸೇಲ್‌ ಮೂಲಕ ಭಾರತದಲ್ಲಿ ಸೇಲ್‌ಗೆ ಬರಲಿದೆ. ಅಂದಹಾಗೆ ಈ ಮೊಬೈಲ್‌ ಆಲ್ಫಾ ಬ್ಲ್ಯಾಕ್ ಮತ್ತು ಔರಾ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

Samsung Galaxy F70 Pro 5G launched

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನಿನ ಫೀಚರ್ಸ್‌ ಹೀಗಿವೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಫೋನ್‌ 6.7 ಇಂಚಿನ FHD+ ಇನ್ಫಿನಿಟಿ-O ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 720 x 1,600 ಪಿಕ್ಸೆಲ್‌ ರೆಸಲ್ಯೂಶನ್‌ ಪಡೆದಿದೆ. ಅಲ್ಲದೇ 800 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಫೋರ್ಟ್‌ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB, 8GB + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F70 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 2MP + 5MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇವೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿರುವ ಜೊತೆಗೆ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :