ಬಜೆಟ್ ದರದ Samsung Galaxy F70 ಬೆಲೆಯಲ್ಲಿ ಆಕರ್ಷಕ ಇಳಿಕೆ; ಇಲ್ಲಿದೆ ಆಫರ್ ಮಾಹಿತಿ
ಫ್ಲಿಪ್ಕಾರ್ಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F70 ಮೊಬೈಲ್ಗೆ ಬಿಗ್ ಆಫರ್
ಸ್ಯಾಮ್ಸಂಗ್ ಗ್ಯಾಲಕ್ಸಿ F70 ಮೊಬೈಲ್ 5,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ಸ್ಯಾಮ್ಸಂಗ್ ಗ್ಯಾಲಕ್ಸಿ F70 ಸ್ಮಾರ್ಟ್ಫೋನ್ ಎರಡು ಆಕರ್ಷಕ ಕಲರ್ಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್ಸಂಗ್ ಕಂಪನಿಯ Samsung Galaxy F70 ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ ಎಕ್ಸಿನೋಸ್ 1330 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 5,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F70 ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Samsung Galaxy F70 ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ F70 ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 29,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬೋಲ್ಡ್ ಬ್ಲ್ಯಾಕ್ ಮತ್ತು ವಿವಿಡ್ ವಯಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಫೀಚರ್ಸ್ ಮಾಹಿತಿ
ಇತ್ತೀಚಿನ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಮೊಬೈಲ್ 6.7 ಇಂಚಿನ ಫುಲ್ HD+ ಇನ್ಫಿನಿಟಿ-ಯು sAMOLED ಹೊಂದಿದೆ. ಹಾಗೆಯೇ 90Hz ವರೆಗೆ ರಿಫ್ರೆಶ್ ರೇಟ್ ಮತ್ತು ಇದರ ಸ್ಕ್ರೀನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಪಡೆದಿದೆ. ಇದರೊಂದಿಗೆ ಆಕ್ಟಾ-ಕೋರ್ ಎಕ್ಸಿನೋಸ್ 1330 (Exynos 1330) ಚಿಪ್ಸೆಟ್ ಪ್ರೊಸೆಸರ್ ಒಳಗೊಂಡಿದ್ದು, ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಸಿಂಚನದಿಂದ ರಕ್ಷಣೆಗಾಗಿ ಈ ಮೊಬೈಲ್ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್ಸಂಗ್ ಗ್ಯಾಲಕ್ಸಿ F70 5G ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್ ಪವರ್ನಲ್ಲಿ ಇವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್ 13 ಮೆಗಾಪಿಕ್ಸೆಲ್ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

