ಅಗ್ಗದ ಬೆಲೆಯಲ್ಲಿ Samsung Galaxy F70e ಸ್ಮಾರ್ಟ್‌ಫೋನ್‌ ಬಿಡುಗಡೆ; ಬೆಲೆ, ಫೀಚರ್ಸ್‌ ಮಾಹಿತಿ ಇಲ್ಲಿದೆ!

Updated on 09-Feb-2026
HIGHLIGHTS

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಫೋನ್ ಇದೇ ಫೆಬ್ರವರಿ 17 ರಿಂದ ಭಾರತದಲ್ಲಿ ಸೇಲ್ ಆರಂಭಿಸಲಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಹಿಂಭಾಗದಲ್ಲಿ ಎರಡು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯ

Samsung ಕಂಪನಿಯು ಬಹುನಿರೀಕ್ಷಿತ Samsung Galaxy F70e 5G ಸ್ಮಾರ್ಟ್‌ಫೋನ್‌ ಇಂದು (ಫೆ 9 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯವನ್ನು ಹೊಂದಿರುವ ಜೊತೆಗೆ ಈ ಮೊಬೈಲ್‌ ದೀರ್ಘಾವಧಿ ಬ್ಯಾಕ್‌ಅಪ್‌ ಒದಗಿಸುವ ಬ್ಯಾಟರಿ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್ ಎರಡು ಕಲರ್‌ ವೇರಿಯಂಟ್‌ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e ಮೊಬೈಲ್‌ ಮಾರಾಟ ದಿನಾಂಕ, ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio Plans: ಜಿಯೋದ ಈ ಪ್ಲಾನಿನಲ್ಲಿ ಅಧಿಕ ಡೇಟಾ, 365 ದಿನಗಳ ವ್ಯಾಲಿಡಿಟಿ, ಉಚಿತ ಕರೆಗಳು ಲಭ್ಯ!

Samsung Galaxy F70e 5G ಬೆಲೆ ಮತ್ತು ಕಲರ್ ಆಯ್ಕೆ

ಸ್ಯಾಮ್‌ಸಂಗ್‌ ಸಂಸ್ಥೆಯ ನೂತನ Samsung Galaxy F70e 5G ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ 4GB RAM + 128GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 12,999 ಆಗಿದ್ದರೆ ಇದರ 6GB RAM + 128GB ಸ್ಟೋರೇಜ್ ಹೊಂದಿರುವ ವೇರಿಯಂಟ್‌ ಬೆಲೆ ರೂ. 14,999 ಆಗಿದೆ. ಈ ನೂತನ ಮೊಬೈಲ್‌ ಇದೇ ಫೆಬ್ರವರಿ 17 ರಂದು Flipkart ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಫೋನ್‌ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್‌ ಆಯ್ಕೆ ಪಡೆದುಕೊಂಡಿದೆ.

Samsung Galaxy F70e 5G ಫೋನಿನ ಫೀಚರ್ಸ್‌

ಸ್ಯಾಮ್‌ಸಂಗ್‌ ಸಂಸ್ಥೆಯ ಈ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು, ಇದರ ಸ್ಕ್ರೀನ್‌ 720×1,600 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ.

ಸ್ಯಾಮ್‌ಸಂಗ್‌ನ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಚಾರ್ಜಿಂಗ್‌ ವ್ಯವಸ್ಥೆ ಹೊಂದಿದೆ. ಅಂದಹಾಗೆ 167.4×77.4×8.2mm ಸುತ್ತಳತೆ ಹೊಂದಿರುವ ಈ ಫೋನ್‌ 199g ತೂಕ ಪಡೆದುಕೊಂಡಿದೆ. ಹಾಗೆಯೇ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿರುವ ಈ ಫೋನ್‌ 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :