ಲೀಡಿಂಗ್ ಇ ಕಾಮರ್ಸ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಸ್ಯಾಮ್‌ಸಂಗ್ ಕಂಪನಿಯ Samsung Galaxy F70e 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರೀ ಆಫರ್‌ನಲ್ಲಿ Samsung Galaxy A36 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಗಮನಿಸಿ!
ಬಜೆಟ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 18,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು, ಇದರ ಸ್ಕ್ರೀನ್ 720×1,600 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.
Disclosure: This Article Contains Affiliate Links