ದಕ್ಷಿಣ ಕೊರಿಯಾ ಟೆಕ್ ದೈತ್ಯ Samsung ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ Samsung Galaxy F70e 5G ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಇಂದಿನಿಂದ (ಫೆಬ್ರವರಿ 13 ರಿಂದ) ಪ್ರಿ – ಬುಕಿಂಗ್ ಪ್ರಾರಂಭ ಮಾಡಲಿದೆ. ಅಂದಹಾಗೆ ಈ ಫೋನ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಇದು ಎರಡು ಆಕರ್ಷಕ ಕಲರ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಫೋನ್ ಮಾರಾಟ ದಿನಾಂಕ, ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಅತ್ಯುತ್ತಮ ಕ್ಯಾಮೆರಾ ಇರುವ Samsung Galaxy S24 5G ಮೊಬೈಲ್ ಖರೀದಿಸಲು ಇದೇ ಬೆಸ್ಟ್ ಚಾನ್ಸ್!
ಹೊಸ Samsung Galaxy F70e 5G ಸ್ಮಾರ್ಟ್‌ಫೋನ್ ಇಂದಿನಿಂದ ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ Pre-Booking ಶುರು ಮಾಡಲಿದೆ. ಅಂದಹಾಗೆ ಈ ಮೊಬೈಲ್ 4GB RAM + 128GB ಸ್ಟೋರೇಜ್ ಆವೃತ್ತಿಯ ಬೆಲೆ ರೂ. 12,999 ಆಗಿದ್ದರೆ ಇದರ 6GB RAM + 128GB ಸ್ಟೋರೇಜ್ ಹೊಂದಿರುವ ವೇರಿಯಂಟ್ ಬೆಲೆ ರೂ. 14,999 ಆಗಿದೆ. ಈ ಮೊಬೈಲ್ ಇದೇ ಫೆಬ್ರವರಿ 17 ರಂದು Flipkart ಮತ್ತು ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟ ಪ್ರಾರಂಭಿಸಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್ ಆಯ್ಕೆ ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಸಂಸ್ಥೆಯ ಈ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಮೊಬೈಲ್ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು, ಇದರ ಸ್ಕ್ರೀನ್ 720×1,600 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಫೋನ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ. ಸ್ಯಾಮ್‌ಸಂಗ್‌ನ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ F70e 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, ಎರಡನೇ ಕ್ಯಾಮೆರಾ 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಅಂದಹಾಗೆ 167.4×77.4×8.2mm ಸುತ್ತಳತೆ ಹೊಂದಿರುವ ಈ ಫೋನ್ 199g ತೂಕ ಪಡೆದುಕೊಂಡಿದೆ. ಹಾಗೆಯೇ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರುವ ಈ ಫೋನ್ 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದುಕೊಂಡಿದೆ.