ಅಗ್ಗದ ಬೆಲೆಯ Samsung Galaxy F70e 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e ಫೋನಿಗೆ ಬಿಗ್ ಆಫರ್‌

ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಪಡೆದಿದೆ

ಸ್ಯಾಮ್‌ಸಂಗ್‌ ಸಂಸ್ಥೆಯ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

ಅಗ್ಗದ ಬೆಲೆಯ Samsung Galaxy F70e 5G ಮೊಬೈಲ್‌ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!

ಸ್ಯಾಮ್‌ಸಂಗ್‌ ಕಂಪನಿಯ ಇತ್ತೀಚಿನ Samsung Galaxy F70e 5G ಮೊಬೈಲ್‌ ಅಗ್ಗದ ಬೆಲೆಯ ಜೊತೆಗೆ ಬಿಗ್ ಬ್ಯಾಟರಿ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಗ್ರಾಹಕರೇ 1049 ರೂ.ಗಳ ಈ ರೀಚಾರ್ಜ್‌ನಲ್ಲಿ 168GB ಡೇಟಾ ಜೊತೆಗೆ ಓಟಿಟಿ ಸೌಲಭ್ಯ!

Samsung Galaxy F70e 5G ಬೆಲೆಯಲ್ಲಿ ಭಾರೀ ಇಳಿಕೆ

ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e 5G ಸ್ಮಾರ್ಟ್‌ಫೋನ್‌ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 18,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 12,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಲೈಮ್‌ಲೈಟ್ ಗ್ರೀನ್ ಮತ್ತು ಸ್ಪಾಟ್‌ಲೈಟ್ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

Samsung Galaxy F70e 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e 5G ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F70e 5G ಮೊಬೈಲ್‌ 6.7 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 720×1,600 ಪಿಕ್ಸಲ್‌ ರೆಸಲ್ಯೂಶನನ್ನು ಹೊಂದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಪಡೆದಿರುವ ಜೊತೆಗೆ 800 nits ಬ್ರೈಟ್ನೆಸ್‌ ಸೌಲಭ್ಯ ಒಳಗೊಂಡಿದೆ. ಈ ಫೋನ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ. ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿರುವ ಈ ಫೋನ್‌ 2 TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್‌ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಸ್ಯಾಮ್‌ಸಂಗ್‌ನ ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಚಾರ್ಜಿಂಗ್‌ ವ್ಯವಸ್ಥೆ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile