Samsung Galaxy F70e ಮೊಬೈಲ್ ಬೆಲೆಯಲ್ಲಿ ಸಖತ್ ಡಿಸ್ಕೌಂಟ್; ಇಲ್ಲಿದೆ ಆಫರ್ ಮಾಹಿತಿ
ಫ್ಲಿಪ್ಕಾರ್ಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F70e ಫೋನಿಗೆ ಬೆಸ್ಟ್ ಆಫರ್
ಸ್ಯಾಮ್ಸಂಗ್ ಗ್ಯಾಲಕ್ಸಿ F70e ಮೊಬೈಲ್ 7,540mAh ಬ್ಯಾಟರಿ ಪಡೆದಿದೆ
ಸ್ಯಾಮ್ಸಂಗ್ ಗ್ಯಾಲಕ್ಸಿ F70e ಸ್ಮಾರ್ಟ್ಫೋನ್ ಎರಡು ಆಕರ್ಷಕ ಕಲರ್ಗಳಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ ಸ್ಯಾಮ್ಸಂಗ್ ಕಂಪನಿಯ Samsung Galaxy F70e ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F70e ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Samsung Galaxy F70e ಮೊಬೈಲ್ ಈಗ ಆಫರ್ನಲ್ಲಿ ಲಭ್ಯ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ F70e ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 22,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 20,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಲೈಮ್ಲೈಟ್ ಗ್ರೀನ್ ಮತ್ತು ಸ್ಪಾಟ್ಲೈಟ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಸ್ಯಾಮ್ಸಂಗ್ ಗ್ಯಾಲಕ್ಸಿ F70e ಫೋನಿನ ಫೀಚರ್ಸ್
ಸ್ಯಾಮ್ಸಂಗ್ ಸಂಸ್ಥೆಯ ಸ್ಯಾಮ್ಸಂಗ್ ಗ್ಯಾಲಕ್ಸಿ F70e 5G ಮೊಬೈಲ್ 6.7 ಇಂಚಿನ HD+ LCD ಡಿಸ್ಪ್ಲೇ ಪಡೆದಿದ್ದು, ಇದರ ಸ್ಕ್ರೀನ್ 720×1,600 ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 800 nits ಬ್ರೈಟ್ನೆಸ್ ಸೌಲಭ್ಯ ನೀಡಲಾಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಆಂಡ್ರಾಯ್ಡ್ 16 ಆಧಾರಿತ One UI 8 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ F70e ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ F70e 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಒಳಗೊಂಡಿದ್ದು ಇದಕ್ಕೆ ಸಪೋರ್ಟಿವ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile
