Samsung Galaxy M17 5G ಮೊಬೈಲ್ ಈಗ ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ! 50MP ಕ್ಯಾಮೆರಾ ಸೌಲಭ್ಯ
ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಈಗ ಆಫರ್‌ನಲ್ಲಿ ಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 5,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ Samsung Galaxy M17 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ Moonlight Silver ಮತ್ತು Sapphire Black ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Realme Narzo Power ಬೆಲೆಯಲ್ಲಿ ಭಾರೀ ಇಳಿಕೆ! 10,001mAh ಬ್ಯಾಟರಿ ಸೌಲಭ್ಯ
Samsung Galaxy M17 5G ಬೆಲೆಯಲ್ಲಿ ಬೊಂಬಾಟ್ ಇಳಿಕೆ
ಬಜೆಟ್ ದರ ಸೇರಿದಂತೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 16,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 14,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ Moonlight Silver ಮತ್ತು Sapphire Black ಕಲರ್ ಆಯ್ಕೆಯಲ್ಲಿ ಲಭ್ಯ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಡಿಸ್‌ಪ್ಲೇಯು 6.77 ಇಂಚಿನ ಕ್ವಾಡ್ ಕರ್ವ್ಡ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1,100 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಸ್ಯಾಮ್‌ಸಂಗ್‌ನ ಈ ಮೊಬೈಲ್ 6GB RAM + 128GB ಹಾಗೂ 8GB + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 15 ಅನ್ನು ಆಧರಿಸಿದ One UI 7 ನಲ್ಲಿ ಕೆಲಸ ಮಾಡುತ್ತದೆ. ಅಲ್ಲದೇ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 13MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಜೊತೆಗೆ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
