ಬಜೆಟ್ ಬೆಲೆಯ Samsung Galaxy M17 5G ಫೋನಿಗೆ ಈಗ ಬಿಗ್ ಡಿಸ್ಕೌಂಟ್!
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಈಗ ಆಫರ್‌ನಲ್ಲಿ ಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 ಫೋನ್ ಮೊದಲ ಕ್ಯಾಮೆರಾ 50MP ಸೆನ್ಸಾರ್ ಹೊಂದಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 ಮೊಬೈಲ್ 6,000mAh ಬ್ಯಾಟರಿ ಸೌಲಭ್ಯ ಪಡೆದಿದೆ
ಸ್ಯಾಮ್‌ಸಂಗ್ ಸಂಸ್ಥೆಯ ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಡಿಮ್ಯಾಂಟ್ ಪಡೆದಿದ್ದು, ಆ ಪೈಕಿ ಬಜೆಟ್ ದರದ ಫೋನ್‌ಗಳು ಸದ್ದು ಮಾಡಿವೆ. ಕಂಪನಿಯ Samsung Galaxy M17 5G ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಸದ್ದು ಮಾಡಿದೆ. ಪ್ರಸ್ತುತ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸಖತ್ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಆಯ್ದ ಬ್ಯಾಂಕ್ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಬಹುದಾಗಿದೆ. ಅಂದಹಾಗೆ ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಸ್ಟೈಲಿಶ್ ಡಿಸೈನ್ ಇರುವ Redmi 15C ಮೊಬೈಲ್ ಬೆಲೆಯಲ್ಲಿ ಈಗ ಬಿಗ್ ಡಿಸ್ಕೌಂಟ್!
Samsung Galaxy M17 5G ಮೊಬೈಲ್ ಡಿಸ್ಕೌಂಟ್‌ನಲ್ಲಿ ಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 4GB + 128GB ವೇರಿಯಂಟ್ ಬೆಲೆ 16,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 14,499 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್ ಎರಡು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ Moonlight Silver ಮತ್ತು Sapphire Black ಕಲರ್ ಆಗಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಡಿಸ್‌ಪ್ಲೇಯು 6.77 ಇಂಚಿನ ಕ್ವಾಡ್ ಕರ್ವ್ಡ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1,100 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಸ್ಯಾಮ್‌ಸಂಗ್‌ನ ಈ ಮೊಬೈಲ್ 6GB RAM + 128GB ಹಾಗೂ 8GB + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 15 ಅನ್ನು ಆಧರಿಸಿದ One UI 7 ನಲ್ಲಿ ಕೆಲಸ ಮಾಡುತ್ತದೆ. ಅಲ್ಲದೇ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 13MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಜೊತೆಗೆ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile