Samsung Galaxy M17 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ! 5,000mAh ಬ್ಯಾಟರಿ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 ಮೊಬೈಲ್ ಬೆಲೆಯಲ್ಲಿ ಇಳಿಕೆ
ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಸಪೋರ್ಟ್ ಹೊಂದಿದೆ
ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ
ಸದ್ಯ ನೀವು ನೂತನ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುತ್ತೀರಾ? ಹಾಗಾದರೆ ನಿಮಗಾಗಿ ಇಲ್ಲಿದೆ ಒಂದು ಬೊಂಬಾಟ್ ಆಫರ್. Samsung Galaxy M17 5G ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ Moonlight Silver ಮತ್ತು Sapphire Black ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Realme NARZO 80 Pro 5G ಫೋನ್‌ಗೆ ಭಾರೀ ಡಿಸ್ಕೌಂಟ್! ಈಗ ಕಡಿಮೆ ಬೆಲೆಯಲ್ಲಿ ಲಭ್ಯ
Samsung Galaxy M17 5G ಬೆಲೆಯಲ್ಲಿ ಇಳಿಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಮೊಬೈಲ್ ಬಜೆಟ್ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 16,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 14,499 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ Moonlight Silver ಮತ್ತು Sapphire Black ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಮೊಬೈಲ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಫೋನ್ ಡಿಸ್‌ಪ್ಲೇಯು 6.77 ಇಂಚಿನ ಕ್ವಾಡ್ ಕರ್ವ್ಡ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 90Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1,100 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Exynos 1330 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಸ್ಯಾಮ್‌ಸಂಗ್‌ನ ಈ ಮೊಬೈಲ್ 6GB RAM + 128GB ಹಾಗೂ 8GB + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇದು ಆಂಡ್ರಾಯ್ಡ್ 15 ಅನ್ನು ಆಧರಿಸಿದ One UI 7 ನಲ್ಲಿ ಕೆಲಸ ಮಾಡುತ್ತದೆ. ಅಲ್ಲದೇ ಮೈಕ್ರೊ SD ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಬಹುದಾಗಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M17 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 13MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 5,000mAh ಬ್ಯಾಟರಿ ಜೊತೆಗೆ 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile