ಮೊಬೈಲ್ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಸ್ಯಾಮ್‌ಸಂಗ್ ಕಂಪನಿಯು ಇದೀಗ ಹೊಸದಾಗಿ Samsung Galaxy M17e 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೊಬೈಲ್ ನಾಳೆ (ಮಾರ್ಚ್ 17 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಫೋನ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ಲೈವ್ ಆಗಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಹಾಗೆಯೇ ಈ ಫೋನ್ ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡಬಹುದು ಎಂದು ಹೇಳಲಾಗಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola Razr 60 Ultra ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಬೊಂಬಾಟ್ ಡಿಸ್ಕೌಂಟ್!
ಸ್ಯಾಮ್‌ಸಂಗ್ ಕಂಪನಿಯ ಮುಂಬರುವ ಗ್ಯಾಲಕ್ಸಿ M17e 5G ಮೊಬೈಲ್ ಈಗಾಗಲೇ ಕುತೂಹಲ ಮೂಡಿಸಿದೆ. ಟಿಪ್‌ಸ್ಟರ್ ವರದಿಯೊಂದರ ಪ್ರಕಾರ ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ ಭಾರತದಲ್ಲಿ 13,999 ರೂಗಳಿಂದ ಆರಂಭಿಕ ಬೆಲೆಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ ಇದು ಯಾವ RAM ಮತ್ತು ಸ್ಟೋರೇಜ್ ವೇರಿಯಂಟ್‌ಗಳಲ್ಲಿ ಲಭ್ಯವಾಗುತ್ತದೆ ಎಂಬುದು ಪ್ರಸ್ತುತ ಸ್ಪಷ್ಟವಾಗಿಲ್ಲ. ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮಾರ್ಚ್ 17 ರಂದು ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ದೃಢಪಡಿಸಲಾಗಿದೆ. ಮುಂಬರುವ ಈ ಮೊಬೈಲ್‌ಗಾಗಿ ಅಮೆಜಾನ್ ಮೈಕ್ರೋಸೈಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಲು ಲಭ್ಯವಿರುತ್ತದೆ ಎಂದು ಖಚಿತಪಡಿಸುತ್ತದೆ.
ಸ್ಯಾಮ್‌ಸಂಗ್ ಕಂಪನಿಯ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದೆ. ಇದರ ಡಿಸ್‌ಪ್ಲೇಯು ಹೈ ಬ್ರೈಟ್‌ನೆಸ್ ಮೋಡ್ (HBM) ನೊಂದಿಗೆ ಅಡಾಪ್ಟಿವ್ ಬ್ರೈಟ್‌ನೆಸ್ ಅನ್ನು ಸಹ ಸಪೋರ್ಟ್ ಮಾಡುತ್ತದೆ. ಇನ್ನು ಗ್ಯಾಲಕ್ಸಿ M17e 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮಲ್ಟಿಮೀಡಿಯಾ ಮತ್ತು ಕ್ಯಾಶುಯಲ್ ಗೇಮಿಂಗ್ ಕಾರ್ಯಗಳಿಗಾಗಿ ಗ್ರಾಫಿಕ್ಸ್ ಸಂಸ್ಕರಣೆಯನ್ನು ನಿರ್ವಹಿಸುತ್ತದೆ. ಹಾಗೆಯೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಹೊಂದಿರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಸಹ ಪಡೆದಿರಲಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಪಡೆದಿರಲಿದೆ. ಅಲ್ಲದೇ ಈ ಫೋನ್ ಆಂಡ್ರಾಯ್ಡ್ 16 ಆಧಾರಿತ ಒನ್ UI 8 ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಗ್ಯಾಲಕ್ಸಿ M17e 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿರಲಿದೆ.