ಶೀಘ್ರದಲ್ಲೇ Samsung Galaxy M17e 5G ಮೊಬೈಲ್‌ ಬಿಡುಗಡೆ! ಗ್ರಾಹಕರ ಗಮನ ಸೆಳೆಯುವ ಫೀಚರ್ಸ್‌

HIGHLIGHTS

ಯುಗಾದಿ ಹಬ್ಬದ ಮುನ್ನವೇ ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದಿರಲಿದೆ

ಗ್ಯಾಲಕ್ಸಿ M17e 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಪಡೆದಿರುವ ನಿರೀಕ್ಷೆ

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಇದೀಗ Samsung Galaxy M17e 5G ಸ್ಮಾರ್ಟ್‌ಫೋನ್‌ ಪರಿಚಯಿಸುವ ಸಿದ್ಧತೆಯಲ್ಲಿ ಇದೆ. ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಗ್ಯಾಲಕ್ಸಿ M17e 5G ಮೊಬೈಲ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ಇನ್ನು ಮುಂಬರುವ ಈ ನೂತನ ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿರಲಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಮೊಬೈಲ್‌ ವೈಬ್ ವೈಲೆಟ್ ಮತ್ತು ಬ್ಲಿಟ್ಜ್ ಬ್ಲೂ ಕಲರ್‌ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳು ಇವೆ. ಹಾಗಾದರೇ ಶೀಘ್ರದಲ್ಲೇ ಎಂಟ್ರಿ ಕೊಡಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Also Read : Amazon EPL 2026: 55 ಇಂಚಿನ ಈ Sony ಸ್ಮಾರ್ಟ್‌ಟಿವಿಗೆ ಭರ್ಜರಿ ಡಿಸ್ಕೌಂಟ್‌

Samsung Galaxy M17e 5G ನಿರೀಕ್ಷಿತ ಬೆಲೆ ಹಾಗೂ ಲಭ್ಯತೆ

ಸ್ಯಾಮ್‌ಸಂಗ್ ಕಂಪನಿಯ ಮುಂಬರುವ ಗ್ಯಾಲಕ್ಸಿ M17e 5G ಮೊಬೈಲ್‌ ಈಗಾಗಲೇ ಕುತೂಹಲ ಮೂಡಿಸಿದೆ. ಅಂದಹಾಗೆ ಈ ಸ್ಮಾರ್ಟ್‌ಫೊನ್‌ ಇದೇ ಮಾರ್ಚ್ 17 ರಂದು ಯುಗಾದಿ ಹಬ್ಬದ ಪೂರ್ವದಲ್ಲಿ ಅಧಿಕೃತವಾಗಿ ಭಾರತೀಯ ಮಾರುಕಟ್ಟೆ ಪ್ರವೇಶಿಸುವ ಬಗ್ಗೆ ಸಂಸ್ಥೆಯು ಎಂದು ದೃಢಪಡಿಸಿದೆ. ಆದರೆ ಸ್ಯಾಮ್‌ಸಂಗ್ ಕಂಪನಿಯು ಮೊಬೈಲ್‌ನ ಬೆಲೆಯನ್ನು ಇನ್ನೂ ಬಹಿರಂಗಪಡಿಸಿಲ್ಲ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್‌ ಎರಡು ಬಣ್ಣ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದ್ದು ಅವುಗಳು ಕ್ರಮವಾಗಿ ವೈಬ್ ವೈಲೆಟ್ ಮತ್ತು ಬ್ಲಿಟ್ಜ್ ಬ್ಲೂ ಆಗಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ನಿರೀಕ್ಷಿತ ಫೀಚರ್ಸ್‌

ಸ್ಯಾಮ್‌ಸಂಗ್‌ ಕಂಪನಿಯ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.7 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಇದರ ಡಿಸ್‌ಪ್ಲೇಯು ಹೈ ಬ್ರೈಟ್‌ನೆಸ್ ಮೋಡ್ (HBM) ನೊಂದಿಗೆ ಅಡಾಪ್ಟಿವ್ ಬ್ರೈಟ್‌ನೆಸ್ ಅನ್ನು ಸಹ ಸಪೋರ್ಟ್‌ ಮಾಡುತ್ತದೆ. ಇನ್ನು ಗ್ಯಾಲಕ್ಸಿ M17e 5G ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮಲ್ಟಿಮೀಡಿಯಾ ಮತ್ತು ಕ್ಯಾಶುಯಲ್ ಗೇಮಿಂಗ್ ಕಾರ್ಯಗಳಿಗಾಗಿ ಗ್ರಾಫಿಕ್ಸ್ ಸಂಸ್ಕರಣೆಯನ್ನು ನಿರ್ವಹಿಸುತ್ತದೆ. ಹಾಗೆಯೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಪಡೆದಿರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್‌ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಆಯ್ಕೆ ಸಹ ಪಡೆದಿರಲಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಪಡೆದಿರಲಿದೆ. ಅಲ್ಲದೇ ಈ ಫೋನ್‌ ಆಂಡ್ರಾಯ್ಡ್ 16 ಆಧಾರಿತ ಒನ್ UI 8 ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಗ್ಯಾಲಕ್ಸಿ M17e 5G ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿರಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :