ನಾಳೆ Samsung Galaxy M17e 5G ಸೇಲ್‌ ಪ್ರಾರಂಭ! ಬೆಲೆ ಹಾಗೂ ಆಫರ್‌ ಮಾಹಿತಿ

HIGHLIGHTS

ಅಮೆಜಾನ್‌ನಲ್ಲಿ ನಾಳೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಖರೀದಿಗೆ ಲಭ್ಯ

ಸ್ಯಾಮ್‌ಸಂಗ್‌ ಕಂಪನಿಯ ಈ ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದೆ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ

ನಾಳೆ Samsung Galaxy M17e 5G ಸೇಲ್‌ ಪ್ರಾರಂಭ! ಬೆಲೆ ಹಾಗೂ ಆಫರ್‌ ಮಾಹಿತಿ

ಸ್ಯಾಮ್‌ಸಂಗ್‌ ಕಂಪನಿಯ ನೂತನ Samsung Galaxy M17e 5G ಮೊಬೈಲ್‌ ನಾಳೆ (ಮಾರ್ಚ್ 20 ರಂದು) ದೇಶಿಯ ಮಾರುಕಟ್ಟೆಗೆ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ ಆಕ್ಟಾ ಕೋರ್ MediaTek Dimensity 6300 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿರುವ ಜೊತೆಗೆ 50MP ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 6,000mAh ಬ್ಯಾಕ್‌ಅಪ್‌ ಒದಗಿಸುವ ಬ್ಯಾಟರಿ ಸಪೋರ್ಟ್‌ ಪಡೆದಿರುವುದು ಪ್ರಮುಖ ಹೈಲೈಟ್ ಆಗಿದೆ. ಈ ಮೊಬೈಲ್‌ ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್‌ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ನಾಳೆ Oppo K14 5G ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ! ಬೆಲೆ ಮತ್ತು ಆಫರ್‌ ಮಾಹಿತಿ ನೋಡಿ

Samsung Galaxy M17e 5G ಫೋನ್ ಸೇಲ್‌ ಮಾಹಿತಿ

ಮಾರುಕಟ್ಟೆ ಪ್ರವೇಶಿಸಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಮೊಬೈಲ್‌ ಅಗ್ಗದ ಪ್ರೈಸ್‌ಟ್ಯಾಗ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ನಾಳೆ (ಮಾರ್ಚ್ 20 ರಂದು) ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 128GB ಸ್ಟೋರೇಜ್ ವೇರಿಯಂಟ್‌ ಬೆಲೆ 12,999 ರೂಗಳು ಆಗಿದೆ. ಇನ್ನು ಈ ಮೊಬೈಲ್‌ ಅಮೆಜಾನ್‌ ತಾಣದಲ್ಲಿ 11,999 ರೂಗಳಿಗೆ ಕಾಣಿಸಿಕೊಂಡಿದೆ. ಅಂದಹಾಗೆ ಗ್ರಾಹಕರು ಈ ಮೊಬೈಲ್‌ Amazon, Samsung.com ಮತ್ತು ಆಯ್ದ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಸಬಹುದಾಗಿದೆ. ಹಾಗೆಯೇ ಇದು ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್‌ ಆಯ್ಕೆಗಳಲ್ಲಿ ಲಭ್ಯ ಇದೆ.

Samsung Galaxy M17e 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಫೀಚರ್ಸ್‌ ಹೀಗಿವೆ

ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಟ್ಟಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಮೊಬೈಲ್ 6.7 ಇಂಚಿನ HD+ Infinity-U LCD ಡಿಸ್‌ಪ್ಲೇ ಹೊಂದಿದ್ದು ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB / 6GB / 8GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಹೊಂದಿದೆ. ಹಾಗೆಯೇ ಮೈಕ್ರೋ SD ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸಬಹುದಾದ ಆಯ್ಕೆ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M17e 5G ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಎರಡನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 25W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಅಲ್ಲದೇ ಧೂಳು ಮತ್ತು ನೀರು ಪ್ರತಿರೋಧಕ್ಕಾಗಿ ಈ ಫೋನ್ IP54 ರೇಟಿಂಗ್‌ ಸೌಲಭ್ಯ ಹೊಂದಿದೆ. ಅಲ್ಲದೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo