ಸ್ಯಾಮ್‌ಸಂಗ್ ಕಂಪನಿಯ ಬಹುನಿರೀಕ್ಷಿತ Samsung Galaxy M17e 5G ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 17 ರಂದು) ದೇಶಿಯ ಮಾರುಕಟ್ಟೆಗೆ ಲಾಂಚ್ ಆಗಲಿದೆ. ಈ ಸ್ಮಾರ್ಟ್‌ಫೋನ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ಲೈವ್ ಆಗಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರುವುದು ಖಚಿತ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್ ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್ ಆಯ್ಕೆಗಳೊಂದಿಗೆ ಎಂಟ್ರಿ ಕೊಡಬಹುದು ಎಂದು ಹೇಳಲಾಗಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಫೋನಿನ ನಿರೀಕ್ಷಿತ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 50MP ಸೆಲ್ಫಿ ಕ್ಯಾಮೆರಾ ಇರುವ Vivo V60e ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಸ್ಯಾಮ್‌ಸಂಗ್ ಸಂಸ್ಥೆಯ ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಫೋನ್ ಈಗಾಗಲೇ ಗ್ರಾಹಕರ ಕುತೂಹಲ ಮೂಡಿಸಿದೆ. ಈ ಮೊಬೈಲ್ ಇಂದು (ಮಾರ್ಚ್ 17 ರಂದು) ಭಾರತದಲ್ಲಿ ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಲಗ್ಗೆ ಇಡಲಿದೆ. ಹಾಗೆಯೇ ಟಿಪ್‌ಸ್ಟರ್ ವರದಿಯೊಂದರ ಪ್ರಕಾರ ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ ಭಾರತದಲ್ಲಿ 13,999 ರೂಗಳಿಂದ ಆರಂಭಿಕ ಬೆಲೆಗೆ ಬರಬಹುದು ಎಂದು ಅಂದಾಜಿಸಲಾಗಿದೆ. ಈ ಮೊಬೈಲ್ ಬ್ಲಿಟ್ಜ್ ಬ್ಲೂ ಮತ್ತು ವೈಬ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಬರುವ ಸೂಚನೆಗಳು ಇವೆ. ಅಮೆಜಾನ್ ಮೈಕ್ರೋಸೈಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಲು ಲಭ್ಯವಿರುತ್ತದೆ ಎಂದು ಖಚಿತಪಡಿಸುತ್ತದೆ.
ಸ್ಯಾಮ್‌ಸಂಗ್ ಸಂಸ್ಥೆಯ ನೂತನ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಮೊಬೈಲ್ 120Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.7 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದುಕೊಂಡಿರಲಿದೆ. ಇದರ ಡಿಸ್‌ಪ್ಲೇಯು ಹೈ ಬ್ರೈಟ್‌ನೆಸ್ ಮೋಡ್ (HBM) ನೊಂದಿಗೆ ಅಡಾಪ್ಟಿವ್ ಬ್ರೈಟ್‌ನೆಸ್ ಅನ್ನು ಸಹ ಸಪೋರ್ಟ್ ಮಾಡುತ್ತದೆ. ಇನ್ನು ಗ್ಯಾಲಕ್ಸಿ M17e 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದು ಮಲ್ಟಿಮೀಡಿಯಾ ಮತ್ತು ಕ್ಯಾಶುಯಲ್ ಗೇಮಿಂಗ್ ಕಾರ್ಯಗಳಿಗಾಗಿ ಗ್ರಾಫಿಕ್ಸ್ ಸಂಸ್ಕರಣೆಯನ್ನು ನಿರ್ವಹಿಸುತ್ತದೆ. ಹಾಗೆಯೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಅನ್ನು ಹೊಂದಿರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಸಹ ಪಡೆದಿರಲಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಪಡೆದಿರಲಿದೆ. ಅಲ್ಲದೇ ಈ ಫೋನ್ ಆಂಡ್ರಾಯ್ಡ್ 16 ಆಧಾರಿತ ಒನ್ UI 8 ನಲ್ಲಿ ಕಾರ್ಯ ನಿರ್ವಹಿಸಲಿದೆ. ಇನ್ನು ಗ್ಯಾಲಕ್ಸಿ M17e 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿರಲಿದೆ.