ಸ್ಯಾಮ್‌ಸಂಗ್ ಕಂಪನಿಯ ಸ್ಮಾರ್ಟ್‌ಫೋನ್ ಖರೀದಿಗೆ ಸದ್ಯ ಅಮೆಜಾನ್ ಆಯೋಜಿಸಿರುವ Amazon Great Summer Sale ಹಾಟ್‌ಸ್ಪಾಟ್ ಆಗಿದೆ. ಹೌದು, ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ Samsung Galaxy M36 5G ಮೊಬೈಲ್ ಭಾರೀ ಬೆಲೆ ಇಳಿಕೆಯಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಎಕ್ಸಿನೋಸ್ 1380 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಮೂರು ಕಲರ್ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಮೇ 12 ರಂದು OnePlus Nord CE 6 Lite ಸ್ಮಾರ್ಟ್‌ಫೋನ್ ಸೇಲ್ ಪ್ರಾರಂಭ!
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 25,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 16,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಸೆರೆನಾ ಗ್ರೀನ್, ಆರೇಂಜ್ ಹಜ್ ಮತ್ತು ವೇಲ್ವೆಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಮೊಬೈಲ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಹೊಂದಿದ್ದು ಇದು ಪೂರ್ಣ HD + ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರವನ್ನು ಹೊಂದಿದೆ. ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ + ರಕ್ಷಣೆಯೊಂದಿಗೆ ಸಜ್ಜುಗೊಂಡಿದೆ. ಮೊಬೈಲ್ ಹಿಂಭಾಗವು OIS ಸಪೋರ್ಟ್ ಜೊತೆಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ, 8MP ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 2MP ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಅದೇ ಸಮಯದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 13MP ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ. ಎರಡೂ ಕ್ಯಾಮೆರಾಗಳು 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಪೋರ್ಟ್ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 1380 ಪ್ರೊಸೆಸರ್ ಅನ್ನು ಆರ್ಮ್ ಮಾಲಿ G68 GPU ಪಡೆದಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಒನ್ UI 7 ನಲ್ಲಿ ಕೆಲಸ ಮಾಡುತ್ತದೆ. ಇದು ವೇಪರ್ ಕೂಲಿಂಗ್ ಚೇಂಬರ್ ಅನ್ನು ಸಹ ಹೊಂದಿದೆ. ಕಂಪನಿಯು 6 ವರ್ಷಗಳವರೆಗೆ OS ನವೀಕರಣಗಳು ಮತ್ತು ಸೆಕ್ಯೂರಿಟಿ ಅಪ್‌ಡೇಟ್ ನೀಡುತ್ತದೆ. ಸ್ಯಾಮ್‌ಸಂಗ್ ಈ ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು ಅದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Disclosure: This Article Contains Affiliate Links