ಭರ್ಜರಿ ಆಫರ್‌ನಲ್ಲಿ ಸ್ಯಾಮ್‌ಸಂಗ್ ಕಂಪನಿಯ ಸ್ಮಾರ್ಟ್‌ಫೋನ್ ಖರೀದಿಗೆ ಇದೀಗ ಅಮೆಜಾನ್ ಇ ಕಾಮರ್ಸ್ ಬೆಸ್ಟ್. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ Samsung Galaxy M36 5G ಮೊಬೈಲ್ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಎಕ್ಸಿನೋಸ್ 1380 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ನಾಳೆ Oppo F33 5G ಮೊಬೈಲ್ ಖರೀದಿಗೆ ಲಭ್ಯ! ಆಕರ್ಷಕ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 25,499 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 19,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಸೆರೆನಾ ಗ್ರೀನ್, ಆರೇಂಜ್ ಹಜ್ ಮತ್ತು ವೇಲ್ವೆಟ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಸ್ಮಾರ್ಟ್‌ಫೋನ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಹೊಂದಿದ್ದು ಇದು ಪೂರ್ಣ HD + ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರವನ್ನು ಹೊಂದಿದೆ. ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ + ರಕ್ಷಣೆಯೊಂದಿಗೆ ಸಜ್ಜುಗೊಂಡಿದೆ. ಮೊಬೈಲ್ ಹಿಂಭಾಗವು OIS ಸಪೋರ್ಟ್ ಜೊತೆಗೆ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ, 8MP ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 2MP ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಅದೇ ಸಮಯದಲ್ಲಿ ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 13MP ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ. ಎರಡೂ ಕ್ಯಾಮೆರಾಗಳು 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಪೋರ್ಟ್ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 1380 ಪ್ರೊಸೆಸರ್ ಅನ್ನು ಆರ್ಮ್ ಮಾಲಿ G68 GPU ಪಡೆದಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ಒನ್ UI 7 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ವೇಪರ್ ಕೂಲಿಂಗ್ ಚೇಂಬರ್ ಅನ್ನು ಸಹ ಹೊಂದಿದೆ. ಕಂಪನಿಯು 6 ವರ್ಷಗಳವರೆಗೆ OS ನವೀಕರಣಗಳು ಮತ್ತು ಸೆಕ್ಯೂರಿಟಿ ಅಪ್‌ಡೇಟ್ ನೀಡುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M36 5G ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು ಅದು 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
Disclosure: This Article Contains Affiliate Links