Samsung Galaxy M47 5G Phone price drop discount on amazon
ಇ ಕಾಮರ್ಸ್ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Samsung Galaxy M47 5G ಮೊಬೈಲ್ ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 365 ದಿನಗಳ ವ್ಯಾಲಿಡಿಟಿ ಒಳಗೊಂಡ Airtel ಟೆಲಿಕಾಂನ ಅತ್ಯುತ್ತಮ ರೀಚಾರ್ಜ್ ಪ್ಲಾನ್ ಇಲ್ಲಿದೆ!
ಬಜೆಟ್ ದರ ಹಾಗೂ ಉತ್ತಮ ಫೀಚರ್ಸ್ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 46,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ 26,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಸ್ಯಾಮ್‌ಸಂಗ್ ಗ್ಯಾಲಕ್ಸಿ M47 ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್ 6.7 ಇಂಚಿನ FHD+ ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು 120Hz ರಿಫ್ರೆಶ್ ರೇಟ್ ಮತ್ತು 1,400 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಹೊಂದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ನಿಂದ ರಕ್ಷಿಸಲಾಗಿದೆ. ಹಾಗೆಯೇ ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್ ಸಹ ಪಡೆದುಕೊಂಡಿದೆ.
ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 5MP ಮತ್ತು 2MP ಸೆನ್ಸಾರ್ ಸಾಮರ್ಥ್ಯ ಒಳಗೊಂಡಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ ಎಲ್ಲಾ ಕ್ಯಾಮೆರಾಗಳಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ 6,000mAh ಬ್ಯಾಟರಿ ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 45W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
Disclosure: This Article Contains Affiliate Links