ನಾಳೆ ಮಾರುಕಟ್ಟೆಗೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Samsung Galaxy M47 5G ಸ್ಮಾರ್ಟ್‌ಫೋನ್‌!

HIGHLIGHTS

ನಾಳೆ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಫೋನ್‌ ಬಿಡುಗಡೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 ಫೋನ್‌ 45W ಫಾಸ್ಟ್‌ ಚಾರ್ಜಿಂಗ್‌ ಒಳಗೊಂಡಿರಲಿದೆ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ ಸ್ನ್ಯಾಪ್‌ಡ್ರಾಗನ್‌ ಚಿಪ್‌ಸೆಟ್ ಪ್ರೊಸೆಸರ್‌ ಪಡೆದಿರಲಿದೆ

ನಾಳೆ ಮಾರುಕಟ್ಟೆಗೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Samsung Galaxy M47 5G ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಕಂಪನಿಯು ನೂತನವಾಗಿ Samsung Galaxy M47 5G ಸ್ಮಾರ್ಟ್‌ಫೋನ್‌ ಅನ್ನು ನಾಳೆ (ಜೂನ್ 29 ರಂದು) ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಮುಂಬರುವ ಈ ಮೊಬೈಲ್‌ ಲಾಂಚ್ ಕುರಿತಾಗಿ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಸಹ ತೆರೆಯಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ 45W ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆಯನ್ನು ಒಳಗೊಂಡಿರುವುದು ಬಹುತೇಕ ಪಕ್ಕಾ ಆಗಿದೆ. ಇದರೊಂದಿಗೆ ಸ್ನ್ಯಾಪ್‌ಡ್ರಾಗನ್‌ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಒಳಗೊಂಡಿರಲಿದೆ. ಹಾಗೆಯೇ ಈ ಫೋನ್‌ ರೋಗ್ ರೆಡ್ ಮತ್ತು ಬ್ಲೇಜ್ ಬ್ಲೂ ಕಲರ್‌ ಆಯ್ಕೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಹಾಗಾದರೆ ಮುಂಬರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಮೊಬೈಲ್‌ನ ಲಾಂಚ್ ಡೇಟ್, ನಿರೀಕ್ಷಿತ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Jio ಟೆಲಿಕಾಂನ ಈ ಪ್ಲಾನ್‌ನಲ್ಲಿ ಪ್ರತಿದಿನ 2GB ಡೇಟಾ ಜೊತೆಗೆ ಜಿಯೋ ಹಾಟ್‌ಸ್ಟಾರ್‌ ಸಹ ಲಭ್ಯ

ನಾಳೆ Samsung Galaxy M47 5G ಬಿಡುಗಡೆ

ಬಿಡುಗಡೆಗೂ ಮುನ್ನವೇ ಮಾರುಕಟ್ಟೆಯ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಫೋನ್‌ ನಾಳೆ (ಜೂನ್ 29 ರಂದು) ಮಧ್ಯಾಹ್ನ 12 ಗಂಟೆಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವುದು ಪಕ್ಕಾ ಆಗಿದೆ. ಈ ಕುರಿತು ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಮೈಕ್ರೋಪೇಜ್‌ ಲೈವ್ ಆಗಿದೆ. ಇನ್ನು ಈ ಫೋನ್‌ ರೋಗ್ ರೆಡ್ ಮತ್ತು ಬ್ಲೇಜ್ ಬ್ಲೂ ಕಲರ್‌ ಆಯ್ಕೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ. ಫೋನ್‌ಗಳ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಕಂಪನಿಯು ಹೊರಹಾಕಿಲ್ಲ.

Samsung Galaxy M47 5G (1)

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಮೊಬೈಲ್‌ ನಿರೀಕ್ಷಿತ ಫೀಚರ್ಸ್‌

ಮುಂಬರುವ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಒಳಗೊಂಡಿರಲಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್+ ರಕ್ಷಣೆಯನ್ನು ಹೊಂದಿರಲಿದೆ. ಇನ್ನು ಈ ಫೋನ್‌ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ನಿಂದ ಕೆಲಸ ಮಾಡಲಿದೆ ಎಂದು ಸ್ಯಾಮ್‌ಸಂಗ್ ದೃಢಪಡಿಸಿದೆ. ಹಾಗೆಯೇ ಈ ಫೋನ್‌ ಆರು ತಲೆಮಾರುಗಳ ಆಂಡ್ರಾಯ್ಡ್ ಓಎಸ್ ಅಪ್‌ಗ್ರೇಡ್‌ಗಳು ಮತ್ತು ಆರು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M47 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿರುವುದು ಖಚಿತವಾಗಿದೆ. ಇನ್ನು ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 5MP ಹಾಗೂ 2MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿವೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 12MP ಸೆನ್ಸಾರ್‌ ಕ್ಯಾಮೆರಾ ಪಡೆದುಕೊಂಡಿರಲಿದೆ. ಈ ಮೊಬೈಲ್‌ 45W ಫಾಸ್ಟ್‌ ಚಾರ್ಜಿಂಗ್‌ ಹೊಂದಿರಲಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile